ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ತಿಮ್ಮಾಪೂರ ಗ್ರಾಮದಲ್ಲಿ ದಾಸಶ್ರೇಷ್ಠ ಭಕ್ತ ಶ್ರೀ ಕನಕದಾಸರ ಜಯಂತ್ಯುತ್ಸವವನ್ನು ಡಿಸೆಂಬರ್ 7ರಂದು ಆಚರಿಸಲಾಗುವುದು.
ರೋಣ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಹಾಗೂ ಸಿದ್ದು ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಗದಗ ಜಿಲ್ಲಾ ಸಹಾಯ ನಿರ್ದೇಶಕ ವೀರಯ್ಯಸ್ವಾಮಿ ಮತ್ತು ರಾಮಕೃಷ್ಣ ರೊಳ್ಳಿ ಶ್ರೀ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡುವರು.
ಶ್ರೀ ಚೌಕಿ ಬಸವೇಶ್ವರ ದೇವಸ್ಥಾನದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಂಚರಿಸಲಿದೆ. ಈ ಮೆರವಣಿಗೆಯಲ್ಲಿ ಮಹಿಳೆಯರಿಂದ 101 ಕುಂಭಮೇಳ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪ್ರಾಯೋಜಿತ ಕೊಣ್ಣೂರಿನ ಶ್ರೀಚಕ್ರ ಮಹಿಳಾ ಡೊಳ್ಳಿನ ಜನಪದ ಕಲಾ ತಂಡಗಳು ಭಾಗವಹಿಸಲಿವೆ ಎಂದು ಟ್ರಸ್ಟ್ ಕಮಿಟಿ ಪ್ರಕಟಣೆ ತಿಳಿಸಿದೆ.



