ನರೇಗಾ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಜಿ.ಪಂ ಸಿಇಒ ಭರತ್

0
zp ceo
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ ಎಸ್ ಅವರು ಅಡವಿಸೋಮಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನರೇಗಾ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಈ ಸಂದರ್ಭದಲ್ಲಿ ನರೇಗಾ ಕೂಲಿಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯು ರೈತರಿಗೆ ಮತ್ತು ಬಡವರಿಗೆ ಅನುಕೂಲವಾಗಿದೆ. ಎಲ್ಲರೂ ಇದರ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಗಂಡು-ಹೆಣ್ಣಿಗೆ ಸಮಾನ ಕೆಲಸಕ್ಕೆ ಸಮಾನ ಕೂಲಿ ನೀಡಲಾಗುವದು.

ಪ್ರತಿ ಕುಟುಂಬಕ್ಕೆ ಒಂದು ವರ್ಷದಲ್ಲಿ 100 ದಿನಗಳ ಉದ್ಯೋಗ ನೀಡಲಾಗುತ್ತಿದೆ. ಗ್ರಾಮೀಣ ಭಾಗದ ಜನರು ಉದ್ಯೋಗ ಅರಸಿ ಬೇರೆ ರಾಜ್ಯ, ಜಿಲ್ಲೆ ಹಾಗೂ ನಗರಗಳಿಗೆ ವಲಸೆ ಹೋಗುವುದನ್ನು ತಡೆಗಟ್ಟುವುದೇ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಎಲ್ಲರೂ ತಮ್ಮ ಸ್ವಂತ ಊರಿನಲ್ಲಿಯೇ ಇದ್ದು ಉದ್ಯೋಗ ಮಾಡಿ ಕೂಲಿ ಪಡೆಯಬಹುದು ಎಂದು ಸಲಹೆ ನೀಡಿದರು.

ಈ ವೇಳೆ ಗದಗ ತಾ.ಪಂ ಸಹಾಯಕ ನಿರ್ದೇಶಕ (ಗ್ರಾ.ಉ), ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ನರೇಗಾ ಸಿಬ್ಬಂದಿಗಳು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here