ಸಾಹಸ ಸಿಂಹ ವಿಷ್ಣುವರ್ಧನ್ ಪುಣ್ಯಭೂಮಿಯ 10 ಗುಂಟೆ ಜಾಗದ ವಿಚಾರವಾಗಿಯೇ ಭಾರತಿ ವಿಷ್ಣುವರ್ಧ ಹಾಗೂ ಅನಿರುದ್ಧ್ ಜತ್ಕರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನ ಮೀಟ್ ಮಾಡಿದ್ದಾರೆ.
ಅಭಿಮಾನ್ ಸ್ಟುಡಿಯೋದಲ್ಲಿರೋ ಪುಣ್ಯಭೂಮಿಯ 10 ಗುಂಟೆ ಜಾಗವನ್ನ ಅಭಿಮಾನಿಗಳಿಗೆ ಗೌರವ ಸಮರ್ಪಿಸಲು ಮೀಸಲು ಇಡಬೇಕಿದೆ. ಅಭಿಮಾನಿಗಳ ಬೇಡಿಕೆನೂ ಇದೆ ಆಗಿದೆ. ಹೀಗಾಗಿ ನಟಿ ಭಾರತಿ ವಿಷ್ಣುವರ್ಧನ್ ಹಾಗೂ ಅಳಿಯ ನಟ ಅನಿರುದ್ಧ್ ಜತ್ಕರ್ ಅವರು ಸಿ.ಎಂ. ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಮನವಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ‘ಅಭಿಮಾನಿಗಳಿಗಾಗಿ ಸ್ಟುಡಿಯೋದಲ್ಲಿ ಜಾಗ ಕೊಡಿ ಎಂದು ಸಿಎಂ ಬಳಿ ಕೇಳಿದ್ದೇವೆ. ಅಭಿಮಾನಿಗಳ ಬಂದು ನಮಸ್ಕಾರ ಮಾಡಿ ಹೋಗಲು ಅವಕಾಶ ಮಾಡಿ ಕೊಡಬೇಕು ಎಂಬುದು ನಮ್ಮ ಮನವಿ’ ಎಂದಿದ್ದಾರೆ .
ವಿಷ್ಣುವರ್ಧನ್ಗೆ ಕರ್ನಾಟಕ ರತ್ನ ಕೊಡಬೇಕು ಎಂಬುದು ಹಲವು ವರ್ಷಗಳ ಕೋರಿಕೆ. ಅಭಿಮಾನಿಗಳು ಈ ಬೇಡಿಕೆಯನ್ನು ಸರ್ಕಾರದ ಮಂದೆ ಇಡುತ್ತಲೇ ಬರುತ್ತಿದ್ದರು. ಈಗ ಅಭಿಮಾನಿಗಳ ಪರವಾಗಿ ಭಾರತಿ ಕೂಡ ಈ ರೀತಿಯ ಮನವಿ ಮಾಡಿದ್ದಾರೆ. ‘ಕರ್ನಾಟಕ ರತ್ನ ಕೊಡಬೇಕು ಎಂದು ನಾನು ಕೇಳುವುದಿಲ್ಲ. ಅಭಿಮಾನಿಗಳು ಕೇಳುತ್ತಿದ್ದಾರೆ. ಅವರ ಕೋರಿಕೆಯನ್ನು ಈಡೇರಿಸಬೇಕು’ ಎಂದು ಭಾರತಿ ಸಿಎಂ ಬಳಿ ಹೇಳಿದ್ದಾರೆ.



