HomeGadag Newsಶಿಲಾನ್ಯಾಸ ಸಮಾರಂಭ ಸೆ.8ಕ್ಕೆ

ಶಿಲಾನ್ಯಾಸ ಸಮಾರಂಭ ಸೆ.8ಕ್ಕೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಗದಗ ಇವರುಗಳ ಸಹಯೋಗದಲ್ಲಿ 5 ಕೋಟಿ ರೂ ವೆಚ್ಚದಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ 13 ಆರಕ್ಷಿತ ಸ್ಮಾರಕಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ಸಮಾರಂಭವನ್ನು ಸೆ.8ರಂದು ಬೆಳಿಗ್ಗೆ 9.30 ಗಂಟೆಗೆ ಲಕ್ಕುಂಡಿಯ ಶ್ರೀ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸುವರು. ನರಗುಂದ ಶಾಸಕ ಸಿ.ಸಿ. ಪಾಟೀಲ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್. ಪಾಟೀಲ, ಸಂಸದರುಗಳಾದ ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ್, ಶಿರಹಟ್ಟಿ ಶಾಸಕರಾದ ಡಾ. ಚಂದ್ರು ಲಮಾಣಿ, ಲಕ್ಕುಂಡಿ ಗ್ರಾ.ಪಂ ಆಧ್ಯಕ್ಷ ಕೆಂಚಪ್ಪ ಎಸ್.ಪ್ರಜಾರ ಆಗಮಿಸುವರು.

ವಿಶೇಷ ಆಹ್ವಾನಿತರಾಗಿ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಸಲ್ಮಾ ಫಾಹಿಮ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ ಚೌಧರಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾದಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಪ್ರಭಾರ) ಅಮರನಾಥ ರೆಡ್ಡಿ, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತರಾದ ದೇವರಾಜ ಎ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ರಾಜ್ಯ ಸಮಿತಿ ಸದಸ್ಯರುಗಳಾದ ಸಿ.ಜಿ. ಬೆಟಸೂರಮಠ, ಗೀತಾಂಜಲಿ ರಾವ್, ಸಿದ್ಧಲಿಂಗೇಶ್ವರ ಎಚ್.ಪಾಟೀಲ, ಅ.ಧ. ಕಟ್ಟಿಮನಿ ಆಗಮಿಸುವರು.

ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಡಾ.ಶರಣು ಗೋಗೇರಿ, ಧಾರವಾಡ ಪುರಾತತ್ವ ಸಂರಕ್ಷಣಾ ಅಭಿಯಂತರರಾದ ಆರ್.ಬಿ. ಶ್ರೀಖಂಡೆ, ಧಾರವಾಡ ಪುರಾತತ್ವ ಸಂರಕ್ಷಣಾ ಸಹಾಯಕರಾದ ಚಂದ್ರಶೇಖರ ಮಸಳಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.

ಅಭಿವೃದ್ಧಿ ಕಾಮಗಾರಿಗಳ ವಿವರ

ಶ್ರೀ ಹಾಲಗುಂಡಿ ಬಸವೇಶ್ವರ ದೇವಾಲಯ ಮತ್ತು ಮಜ್ಜನ ಬಾವಿ ಸಂರಕ್ಷಣೆ, ಶ್ರೀ ಈಶ್ವರ ದೇವಾಲಯ ಸಂರಕ್ಷಣೆ, ಶ್ರೀ ಕಲ್ಮಠ ದೇವಾಲಯ ಮತ್ತು ಕಲ್ಮಠ ಬಾವಿ ಸಂರಕ್ಷಣೆ, ಕಣ್ಣರ ಬಾವಿ ಸಂರಕ್ಷಣೆ, ಶ್ರೀ ಕೋಟೆ ವೀರಭದ್ರೇಶ್ವರ ದೇವಾಲಯ ಸಂರಕ್ಷಣೆ, ಶ್ರೀ ಲಕ್ಷ್ಮಿನಾರಾಯಣ ದೇವಾಲಯ ಸಂರಕ್ಷಣೆ, ಶ್ರೀ ಲೆಕ್ಕದ ವೀರಣ್ಣ ದೇವಾಲಯ ಸಂರಕ್ಷಣೆ, ಶ್ರೀ ಈಶ್ವರ ಗುಡಿ ಹತ್ತಿರದ ಮಾಳಿ ಬಾವಿ ಸಂರಕ್ಷಣೆ, ಮಲ್ಲಿಕಾರ್ಜುನ ದೇವಾಲಯ ಸಂರಕ್ಷಣೆ, ಶ್ರೀ ನೀಲಕಂಠೇಶ್ವರ ದೇವಾಲಯ ಸಂರಕ್ಷಣೆ, ಶ್ರೀ ಸಿದ್ದೇಶ್ವರ ದೇವಾಲಯ ಸಂರಕ್ಷಣೆ, ಶ್ರೀ ಸೋಮೇಶ್ವರ ದೇವಾಲಯ ಸಂರಕ್ಷಣೆ, ಮತ್ತು ಕಪ್ಪಲಿ ಬಾವಿ ಸಂರಕ್ಷಣೆ, ಶ್ರೀ ವಿರುಪಾಕ್ಷ ದೇವಾಲಯ ಸಂರಕ್ಷಣೆ.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!