ವಿಜಯಸಾಕ್ಷಿ ಸುದ್ದಿ, ಗದಗ : ಸಭಾಪತಿ ಬಸವರಾಜ ಹೊರಟ್ಟಿ ದಂಪತಿಗಳು ದತ್ತು ಪಡೆದ ಸಿದ್ದಲಿಂಗ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶುದ್ಧ ನೀರಿನ ಘಟಕ ಸ್ಥಾಪನೆಗೆ ಭೂಮಿ ಪೂಜಾ ಕಾರ್ಯಕ್ರಮವನ್ನು ಜೂನ್ 24ರ ಬೆಳಿಗ್ಗೆ 10.30ಕ್ಕೆ ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರಭಾರಿ ಮುಖ್ಯೋಪಾಧ್ಯಾಯರಾದ ಜಯಲಕ್ಷ್ಮಿ ಬಸವರಾಜ್ ಅಣ್ಣಿಗೇರಿ ತಿಳಿಸಿದ್ದಾರೆ.
ಉತ್ತಮ ಆರೋಗ್ಯಕ್ಕೆ ಶುದ್ಧ ನೀರಿನ ಅವಶ್ಯಕತೆಯಿರುವುದನ್ನು ಅರಿತ ಸಭಾಪತಿ ಬಸವರಾಜ ಹೊರಟ್ಟಿ ಅವರು ಇಲ್ಲಿ ಓದುತ್ತಿರುವ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿತ್ಯ ಶುದ್ಧ ನೀರು ಕುಡಿಯಲು ಅವಕಾಶ ಕಲ್ಪಿಸಿ ಕೊಡಲಿದ್ದಾರೆ . ಇಂತಹ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಶಂಕ್ರಮ್ಮ ಆರ್.ಹಣಮಗೌಡ್ರು, ಸಂಜೀವಿನಿ ಜಿ.ಕೂಲಗುಡಿ, ಎಂ.ಐ. ಶಿವನಗೌಡ್ರು, ಮಂಜುಳಾ ಪಿ. ಸಾಮ್ರಾಣಿ, ಶಶಿಕಲಾ ಬಿ.ಗುಳೇದವರ, ಸುಮಂಗಲ ಎಂ.ಪತ್ತಾರ್, ಶೋಭಾ ಎಸ್.ಗಾಳಿ, ಶಾರದಾ ಎ.ಬಾಣದ, ರಮೇಶ್ ಬಸರಿ, ಸಾವಿತ್ರಿ ಎ.ಗದ್ದನಕೇರಿ, ಎನ್.ಆರ್. ಶಿರೋಳ್, ಸಬಿಯಾ ಯು.ಕುಷ್ಟಗಿ, ಗಂಗಾ ಎಂ.ಅಳವಂಡಿ, ಪದ್ಮಾ ವಿ.ದಾಸರ್, ಲಕ್ಷ್ಮಮ್ಮ ಮಾಳೋತ್ತರ್ ಮುಂತಾದವರು ವಿನಂತಿಸಿದ್ದಾರೆ.