HomeKarnataka Newsಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

For Dai;y Updates Join Our whatsapp Group

Spread the love

ಮೈಸೂರು: ಆರ್ಥಿಕ ಹಾಗೂ ಸಾಮಾಜಿಕ ಶಕ್ತಿಗಾಗಿ ಶಿಕ್ಷಣ ಅಗತ್ಯವಾಗಿದ್ದು, ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದ ವತಿಯಿಂದ ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ಸಿದ್ದರಾಮೇಶ್ವರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.

ಉತ್ಪಾದಿಸಿದ ಸಂಪತ್ತಿನ ಸಮಾನ ಹಂಚಿಕೆ
ಶ್ರೀ ಸಿದ್ದರಾಮೇಶ್ವರ ಜಯಂತಿಯ ಶುಭ ಕೋರಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಸಮಸಮಾಜ ನಿರ್ಮಿಸುವ ಸಂಕಲ್ಪವನ್ನು ಸರ್ಕಾರ ಹೊಂದಿದೆ. ಉತ್ಪಾದಿಸಿದ ಸಂಪತ್ತು ಸಮಾನವಾಗಿ ಹಂಚಿಕೆಯಾಗಿಬೇಕು. ರಾಜ್ಯದ ಸರ್ವರಿಗೂ ಸಮಪಾಲು, ಸಮಬಾಳು ಸಿಗಬೇಕೆಂಬುದೇ ಸರ್ಕಾರದ ಉದ್ದೇಶ.

ಸಿದ್ದರಾಮೇಶ್ವವರೂ ಸೇರಿದಂತೆ ಸಂತಮಹಾಶಯರು, ಸಮಾಜದಲ್ಲಿ ಜಾತಿವರ್ಗಗಳ ವ್ಯವಸ್ಥೆಗಳು ತೊಲಗಬೇಕು ಎಂದು ಬಯಸಿದ್ದರು. ಬಸವಾದಿ ಶರಣರು 12 ನೇ ಶತಮಾನದಲ್ಲಿ ಸಮಾನತೆಯ ಸಿದ್ಧಾಂತವನ್ನು ಬೋಧಿಸಿದ್ದರು. ಶೋಷಣೆಗೊಳಗಾದ ಹಾಗೂ ಅವಕಾಶವಂಚಿತ ಸಮುದಾಯಗಳು ಸಂಘಟಿತರಾಗುವ ಸಮ್ಮೇಳನಗಳು ಉತ್ತಮ ಕಾರ್ಯಗಳಾಗಿವೆ ಎಂದರು.

ನಾನು ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿರಿಸಿದ್ದೇನೆ
ಬಸವಜಯಂತಿಯಂದು ನಾನು 2013 ಮೇ 13 ರಂದು ನಾನು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದೆ. ಬಸವಣ್ಣನವರು ಬೋಧಿಸಿದಂತೆ ನಾನು ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿರಿಸಿದ್ದೇನೆ. ರಾಜಕೀಯ ಸ್ವಾತಂತ್ರ್ಯವು, ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯದ ತಳಹದಿಯ ಮೇಲೆ ನಿಂತಿದೆ. ಶಿಕ್ಷಣ ಪಡೆದಾಗ ಮಾತ್ರ ಸಾಮಾಜಿಕ ಆರ್ಥಿಕ ಶಕ್ತಿ ದೊರಕಲು ಸಾಧ್ಯ ಎಂದರು.

ಗ್ಯಾರಂಟಿ ಯೋಜನೆಗಳು ಮಹಿಳಾಸಮೂಹಕ್ಕೆ ವರದಾನ
ಆರ್ಥಿಕವಾಗಿ ಶಕ್ತಿಯಿಲ್ಲದವರಿಗೆ ಗ್ಯಾರಂಟಿ ಯೋಜನೆಗಳನ್ನು ಸಮಾನವಾಗಿ ನೀಡಲಾಗಿದೆ. ಮಹಿಳೆಯರಿಗೆ ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ತಾರತಮ್ಯವಿಲ್ಲದೇ ನೀಡಲಾಗುತ್ತಿದೆ. ನಮ್ಮ ಸರ್ಕಾರ ಭೋವಿ ನಿಗಮವೂ ಸೇರಿದಂತೆ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳ ಸಾಲವನ್ನು ಮನ್ನಾ ಮಾಡಲಾಗಿದೆ. ಪರಿಶಿಷ್ಟ ಜಾತಿಯ ಸಮುದಾಯಗಳಲ್ಲಿನ ಅಸಮಾನತೆ ಹೋಗಲಾಡಿಸಲು ಐತಿಹಾಸಿಕ ಒಳ ಮೀಸಲಾತಿಯನ್ನು ಜಾರಿಗೊಳಿಸಿದೆ ಎಡಗೈಗೆ 5.25%, ಬಲಗೈಗೆ 5.25%, ಹಾಗೂ ಇತರ ಉಪಜಾತಿಗಳಿಗೆ 4.5% ಹಂಚಿಕೆ ಮಾಡಲಾಗಿದೆ ಎಂದರು.

ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ
ಈಗ ಜಾತಿ ಸಮೀಕ್ಷೆ ನಡೆಯುತ್ತಿದ್ದು, ಜಾತಿ ಸಮೀಕ್ಷೆ ವರದಿ ಬಂದ ನಂತರ ಚರ್ಚೆ ಮಾಡೋಣ ಎಂದರು. ನಮ್ಮ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ. ಯಾರಿಗೂ ಅನ್ಯಾಯವಾಗಬಾರದು, ನೂರಕ್ಕೆ ನೂರು ಅಲ್ಲದಿದ್ದರೂ 99% ನ್ಯಾಯ ಒದಗಿಸಲು ಪ್ರಯತ್ನಿಸಲಾಗುವುದು ಎಂದರು.

ಅವಕಾಶಗಳಿಂದ ಯಾರೂ ವಂಚಿತರಾಗಬಾರದು
ಸಮುದಾಯದವರು ಇಟ್ಟಿರುವ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಭರವಸೆ ನೀಡಿದ ಮುಖ್ಯಮಂತ್ರಿಗಳು ಸಮುದಾಯದವರಿಗೆ ಕುಲಪತಿ, ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು. ಏಳು ಕೋಟಿ ಜನರಿಗೂ ನ್ಯಾಯ ಸಿಗಬೇಕು ಹಾಗೂ ಯಾರೂ ಅವಕಾಶಗಳಿಂದ ವಂಚಿತರಾಗಬಾರದು ಎಂದರು. ಸಂವಿಧಾನ ರಚನೆಯಾದ ನಂತರ ಸಮಾನತೆಯನ್ನು ಸಾಧಿಸುವತ್ತ ದೇಶ ಸಾಗಿದ್ದು, ಸಂವಿಧಾನ ಹೇಳುವಂತೆಯೇ ನಡೆದುಕೊಳ್ಳುತ್ತೇವೆ ಎಂದರು.

ಸಹಿಷ್ಣುತೆಯನ್ನು ರೂಡಿಸಿಕೊಳ್ಳಬೇಕು
ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವ ಸಂವಿಧಾನದ ಮೂಲ ತತ್ವಗಳು. ಜಡತ್ವದಿಂದ ಕೂಡಿರುವ ಜಾತಿ ವ್ಯವಸ್ಥೆಯನ್ನು ಸುಧಾರಿಸಬೇಕಿದೆ. ಎಲ್ಲಾ ಜಾತಿಗಳನ್ನು ಪ್ರೀತಿಸಿ, ಅವರೂ ನಮ್ಮನ್ನು ಪ್ರೀತಿಸುವಂತೆ ಮಾಡಬೇಕು ಹಾಗೂ ಸಹಿಷ್ಣುತೆಯನ್ನು ರೂಡಿಸಿಕೊಳ್ಳಬೇಕು. ಉತ್ಪಾದನೆಯಲ್ಲಿ ಎಲ್ಲರೂ ಭಾಗವಹಿ ಉತ್ಪನ್ನವನ್ನು ಸಮಾನವಾಗಿ ಹಂಚಿಕೊಳ್ಳಬೇಕು ಎಂದು ಸಿದ್ಧರಾಮೇಶ್ವರರು ನಮಗೆ ಬೋಧಿಸಿದ್ದರು. ಅವರು ನಡೆದ ಹಾದಿಯಲ್ಲಿಯೇ ನಮ್ಮ ಸರ್ಕಾರವೂ ನಡೆಯುತ್ತಿದೆ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!