ವಿಜಯಸಾಕ್ಷಿ ಸುದ್ದಿ, ಗದಗ: ಗದುಗಿನ ಪಂಚವಟಿ ನಾಗರಕಟ್ಟಿ ಸಮೀಪ ಗದಗ-ಬೆಟಗೇರಿ ನಗರಸಭೆ ವಾರ್ಡ್ ನಂ. 34ರಲ್ಲಿ ಸಿ.ಸಿ ಚರಂಡಿ ನಿರ್ಮಾಣ ಕಾಮಗಾರಿಗೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ನಗರಸಭಾ ಸದಸ್ಯೆ ವಿದ್ಯಾವತಿ ಗಡಗಿ ಸೇರಿದಂತೆ ಗಣ್ಯರು, ಹಿರಿಯರು ಹಾಜರಿದ್ದರು.



