ಬೀದರ್: ಬೀದರ್ ನಗರದ ಶಿವನಗರದಲ್ಲಿ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಬೀದರ್ ಪೊಲೀಸರು ಭರ್ಜರಿ ದಾಳಿ ನಡೆಸಿ, ಹೊರರಾಜ್ಯದ ಐವರು ಯುವತಿಯರನ್ನು ರಕ್ಷಿಸಿದ್ದಾರೆ.
ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ಮಹಾರಾಷ್ಟ್ರ, ಅಸ್ಸಾಂ, ಹರಿಯಾಣ ಮತ್ತು ಮಧ್ಯಪ್ರದೇಶದಿಂದ ಬಂದ ಯುವತಿಯರನ್ನು ರಕ್ಷಣೆ ಮಾಡಲಾಗಿದೆ .ಸ್ಪಾ ಅಡ್ಡೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗದ ಹಸ್ತಾಂತರಕ್ಕೆ ಒಪ್ಪಿಸಲಾಗಿದೆ.
ಈ ಕಾರ್ಯಾಚರಣೆಯನ್ನು ಬೀದರ್ ಎಸ್ಪಿ ಪ್ರದೀಪ್ ಗುಂಟಿ ಮಾರ್ಗದರ್ಶನದಲ್ಲಿ ನೂತನ ಠಾಣೆಯ ಸಿಬ್ಬಂದಿ ಸೇರಿದಂತೆ ಸ್ಥಳೀಯ ಪೊಲೀಸರು ಯಶಸ್ವಿಯಾಗಿ ನಡೆಸಿದರು.



