HomeGadag Newsಗದಗ ಪೊಲೀಸರ ಬಿಗ್ ಆಕ್ಷನ್: ಐವರು ಅಪರಾಧಿಗಳಿಗೆ ಗಡಿಪಾರು ಆದೇಶ

ಗದಗ ಪೊಲೀಸರ ಬಿಗ್ ಆಕ್ಷನ್: ಐವರು ಅಪರಾಧಿಗಳಿಗೆ ಗಡಿಪಾರು ಆದೇಶ

For Dai;y Updates Join Our whatsapp Group

Spread the love

ಗದಗ: ಜಿಲ್ಲೆಯಲ್ಲಿನ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಗದಗ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದು, ವಿವಿಧ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಿದ್ದಾರೆ.

ದವನಪ್ಪ, ದಾವಲಸಾಬ್, ಮುಸ್ತಾಕ್, ಅಭಿಷೇಕ್ ಹಾಗೂ ಸಾಹಿಲ್ ಎಂಬವರ ವಿರುದ್ಧ ಗಡಿಪಾರು ಆದೇಶ ಜಾರಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇವರು ಕೊಲೆ ಯತ್ನ, ಹಲ್ಲೆ, ಗಲಭೆ, ಸಾರ್ವಜನಿಕ ಶಾಂತಿ ಭಂಗ, SC/ST ದೌರ್ಜನ್ಯ ಹಾಗೂ ಗಾಂಜಾ ಮಾರಾಟ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದರೆಂದು ಆರೋಪಿಸಲಾಗಿದೆ.

ನರಗುಂದದ ದವನಪ್ಪ ವಿರುದ್ಧ 2017ರಿಂದಲೇ ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿದ್ದು, ಗಲಭೆ ಮತ್ತು ಬೆದರಿಕೆ ಪ್ರಕರಣಗಳಲ್ಲಿ ಅವನ ಹೆಸರು ಕೇಳಿಬಂದಿದೆ. ದಾವಲಸಾಬ್ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಗಾಂಜಾ ಸಾಗಾಟ ಹಾಗೂ ಮಾರಾಟ ಪ್ರಕರಣಗಳು ದಾಖಲಾಗಿವೆ.

ಮುಸ್ತಾಕ್ ವಿರುದ್ಧ ಗದಗ ನಗರ ಠಾಣೆಯಲ್ಲಿ ಹಲ್ಲೆ, ಬೆದರಿಕೆ ಹಾಗೂ SC/ST ಕಾಯ್ದೆಯಡಿ ಪ್ರಕರಣಗಳು ದಾಖಲಾಗಿದ್ದು, ಅಭಿಷೇಕ್ ಮತ್ತು ಸಾಹಿಲ್ ವಿರುದ್ಧವೂ ಸಾರ್ವಜನಿಕ ಶಾಂತಿ ಭಂಗ ಹಾಗೂ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿವೆ.

ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದ ಆರೋಪಿಗಳ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂದೆಯೂ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಕಠಿಣ ಕ್ರಮ ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!