ಬೆಂಗಳೂರು: ಅಧಿವೇಶನಕ್ಕೂ ಮೊದಲು ಬೆಳಗಾವಿಯಲ್ಲಿ ವಕ್ಫ್ ವಿಚಾರವಾಗಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಧಿವೇಶನಕ್ಕೂ ಮೊದಲು ಬೆಳಗಾವಿಯಲ್ಲಿ ವಕ್ಫ್ ವಿಚಾರವಾಗಿ ಬೃಹತ್ ಸಮಾವೇಶ ಏರ್ಪಡಿಸಲಾಗುವುದು. ಅಧಿಕಾರ ದುರ್ಬಳಕೆ ಕೈಬಿಡುವಂತೆ ಕಾಂಗ್ರೆಸ್ ಸರ್ಕಾರ ಮತ್ತು ವಕ್ಫ್ ಮಂಡಳಿಗೆ ಸ್ಪಷ್ಟ ಸಂದೇಶ ನೀಡಲಿದ್ದೇವೆ ಎಂದು ಪ್ರಕಟಿಸಿದರು.
ಅಹವಾಲು, ಮಾಹಿತಿ ಸಂಗ್ರಹಕ್ಕಾಗಿ ಪ್ರತಿ ಜಿಲ್ಲೆಯಲ್ಲಿ ರೈತರು, ವಕೀಲರು ಸೇರಿ ಪ್ರಮುಖರುಳ್ಳ 5 ಜನರ ತಂಡ ರಚಿಸಿದ್ದೇವೆ ಎಂದರು. ಇನ್ನೂ ಕಾಂಗ್ರೆಸ್ ಶಾಸಕರೊಬ್ಬರು ಅನುದಾನ ಸಿಗದೇ ಇರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರ ದಿವಾಳಿಯಾಗಿದೆ. ವೇತನ ನೀಡಲು ದುಡ್ಡಿಲ್ಲ, ರಾಜು ಕಾಗೆಯವರು ಅನುದಾನ ಸಿಗದ ಬಗ್ಗೆ ತಿಳಿಸಿ ಆತ್ಮಹತ್ಯೆಯ ಮಾತನಾಡಿದ್ದಾರೆ. ಗವಿಯಪ್ಪ, ರಾಯರೆಡ್ಡಿ, ಬಿ.ಆರ್ ಪಾಟೀಲ್ ಮತ್ತಿತರರು ಮಾತನಾಡಿದ್ದಾರೆ ಎಂದು ವಿವರಿಸಿದರು.