HomeKarnataka Newsಆಕಾಶದಿಂದ ಬರಲಿದೆ ಭಾರೀ ಆಪತ್ತು: ಕೋಡಿಮಠ ಶ್ರೀಗಳ ಸ್ಫೋಟಕ ಭವಿಷ್ಯ

ಆಕಾಶದಿಂದ ಬರಲಿದೆ ಭಾರೀ ಆಪತ್ತು: ಕೋಡಿಮಠ ಶ್ರೀಗಳ ಸ್ಫೋಟಕ ಭವಿಷ್ಯ

For Dai;y Updates Join Our whatsapp Group

Spread the love

ಹಾಸನ: ಪ್ರಾಕೃತಿಕ ದೋಷವಿದ್ದು ಭೂಮಿ, ಅಗ್ನಿ, ವಾಯು, ಆಕಾಶದಿಂದ ಎಲ್ಲಾ ಕಡೆ ತೊಂದರೆ ಆಗಲಿದೆ ಎಂದು ಹಾರನಹಳ್ಳಿ ಗ್ರಾಮದ ಕೋಡಿಮಠ ಪೀಠಾಧ್ಯಕ್ಷ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಹಳ್ಳಿ ಗ್ರಾಮದ ಕೋಡಿಮಠದಲ್ಲಿ ಮಾತನಾಡಿದ ಅವರು,

ಅಭಿಮನ್ಯುವಿನ ಬಿಲ್ಲನ್ನು ಮೋಸದಿಂದ ಕರ್ಣನ ಕೈಯಲ್ಲಿ ದಾರ ಕತ್ತರಿಸಿದ್ದರು. ಮಹಾಭಾರತದಲ್ಲಿ ಕೃಷ್ಣ ಇದ್ದ, ಗದಾಯುದ್ಧದಲ್ಲಿ ಭೀಮಾ ಗೆದ್ದ. ಇದೀಗ ಕೃಷ್ಣ ಇಲ್ಲದೆ ದುರ್ಯೋಧನ ಗೆಲ್ಲುತ್ತಾನೆ. ಸೆಂಟ್ರಲ್‌ನಲ್ಲೂ, ಸ್ಟೇಟ್‌ಲ್ಲೂ ಆಗೋದು ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಸರ್ಕಾರಕ್ಕೆ ಏನು ತೊಂದರೆ ಆಗಲ್ಲ ಎಂದು ಹಿಂದೆಯೇ ಹೇಳಿದ್ದೆ ಎಂದು ತಿಳಿಸಿದ್ದಾರೆ. ಪ್ರಕೃತಿ ವಿಕೋಪ ಕುರಿತು ಮಾತನಾಡಿ, ಮಳೆ ಇನ್ನೂ ಮುಂದುವರೆಯಲಿದೆ. ಜಾಸ್ತಿ ತೊಂದರೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಪ್ರಾಕೃತಿಕ ದೋಷವಿದ್ದು ಭೂಮಿ, ಅಗ್ನಿ, ವಾಯು, ಆಕಾಶದಿಂದ ಎಲ್ಲಾ ಕಡೆ ತೊಂದರೆ ಆಗಲಿದೆ ಎಂದು ಎಚ್ಚರಿಸಿದ್ದಾರೆ.

ಜನ ಇದ್ದಂಗೆ ಸಾಯ್ತಾರೆ. ಭೂಮಿ ಬಿರುಕು ಬಿಡುತ್ತದೆ. ಗುಡ್ಡ ಕುಸಿದು ಹೋಗುತ್ತದೆ. ಪ್ರವಾಹದಲ್ಲಿ ಜಗತ್ತು ಮುಳುಗುತ್ತದೆ ಎಂದು ಹಿಂದೊಮ್ಮೆ ನಾನು ಹೇಳಿದ್ದೇನೆ. ಇನ್ನೂ ಮಳೆಯಾಗಲಿದೆ. ಅದರಿಂದ ಅನಾಹುತ ಸಂಭವಿಸುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!