ಹಾಸನ: ಜೀವಾವಧಿ ಶಿಕ್ಷೆಗೆ ಗುರಿಯಾದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದಲ್ಲಿ ಇಂದು ಮಹತ್ವದ ಬೆಳವಣಿಗೆ ನಡೆಯಲಿದೆ. ಕರ್ನಾಟಕ ಹೈಕೋರ್ಟ್‌ನ ದ್ವಿಸದಸ್ಯ ಪೀಠವು ಇಂದು ಮಧ್ಯಾಹ್ನ 2.30ಕ್ಕೆ ಪ್ರಜ್ವಲ್ ರೇವಣ್ಣ ಪ್ರಕರಣದ ವಿಚಾರಣೆಯನ್ನು ನಡೆಸಲಿದೆ.
ಜೀವಾವಧಿ ಶಿಕ್ಷೆ ಸಸ್ಪೆಂಡ್ ಆಗುವ ಸಾಧ್ಯತೆ ಇರುವ ಹಿನ್ನೆಲೆ, ಹಾಸನ ಸೇರಿದಂತೆ ರಾಜ್ಯದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿದೆ. ಇಂದು ಮಧ್ಯಾಹ್ನ 2:30ಕ್ಕೆ ನಡೆಯಲಿರುವ ವಿಚಾರಣೆ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಹಾಗೂ ಕಾನೂನು ಭವಿಷ್ಯವನ್ನು ನಿರ್ಧರಿಸಬಲ್ಲ ಪ್ರಮುಖ ಘಟ್ಟವಾಗಲಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ವಕೀಲ ದೇವರಾಜೇಗೌಡ, ಕೆಳಹಂತದ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಕೆಲವು ತಾಂತ್ರಿಕ ದೋಷಗಳು ಮತ್ತು ಸಾಕ್ಷಿ ಲೋಪದೋಷಗಳು ಕಾಣಿಸಿಕೊಂಡಿವೆ. ಅವುಗಳನ್ನು ಹೈಲೆಟ್ ಮಾಡಿ ಸುದೀರ್ಘ ವಾದ ಮಂಡನೆ ಸಲ್ಲಿಸಲಾಗಿದೆ.
ಈ ಹಿನ್ನೆಲೆ, ಪ್ರಜ್ವಲ್ ರೇವಣ್ಣ ಈ ಪ್ರಕರಣದಿಂದ ಹೊರಬರುವ ಸಾಧ್ಯತೆ ಹೆಚ್ಚು ಎಂದು ವಕೀಲ ಅಭಿಪ್ರಾಯಪಟ್ಟಿದ್ದಾರೆ. “ನ್ಯಾಯಾಂಗದ ಇತಿಹಾಸದಲ್ಲಿ ಕಾನೂನು ಚೌಕಟ್ಟಿನಲ್ಲಿ ಏನಾಗುತ್ತಿಲ್ಲವೆಂದು ಊಹಿಸಲು ಸಾಧ್ಯವಿಲ್ಲ. ಕೊಟ್ಟಿರುವ ತೀರ್ಪು ಸಸ್ಪೆಂಡ್ ಆಗಬಹುದು ಅಥವಾ ಬೇಲ್ ಕೂಡಾ ದೊರೆಯುವ ಸಾಧ್ಯತೆ ಇದೆ,” ಎಂದು ದೇವರಾಜೇಗೌಡ ಹೇಳಿದರು.


