ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್ ಜಾಮೀನು ನೀಡಿದೆ. ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಸೇರಿ ಇತರರು ಸಲ್ಲಿಸಿದ್ದ ಜಾಮೀನು ಅರ್ಜಿಗಳ ಕುರಿತು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯಪೀಠ ಕಳೆದ ಸೋಮವಾರ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು.
Advertisement
ಜೂನ್ನಲ್ಲಿ ರೇಣುಕಾ ಸ್ವಾಮಿ ಕೊಲೆ ನಡೆಯಿತು. ಈ ಪ್ರಕರಣದಲ್ಲಿ ಒಟ್ಟೂ 17 ಮಂದಿ ಅರೆಸ್ಟ್ ಆಗಿದ್ದರು. ಈ ಪೈಕಿ ಕೆಲವರಿಗೆ ಈಗಾಗಲೇ ಜಾಮೀನು ಸಿಕ್ಕಿತ್ತು. ಆದರೆ, ದರ್ಶನ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಕೆಲವರು ಇನ್ನೂ ಜೈಲಿನಲ್ಲೇ ಇದ್ದರು. ಈ ಅವರೆಲ್ಲರಿಗೂ ಜಾಮೀನು ಸಿಕ್ಕಿದೆ. ಈ ಪ್ರಕರಣದಲ್ಲಿ ಕೋರ್ಟ್ ಆದೇಶ ಹೊರಡಿಸಿದೆ. ಇದು ಅವರಿಗೆ ಬಿಗ್ ರಿಲೀಫ್ ಕೊಟ್ಟಿದೆ.