ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದ ಬಸವರಾಜ್ ಬೊಮ್ಮಾಯಿಗೆ ಬಿಗ್ ರಿಲೀಫ್ ಸಿಕ್ಕಿದೆ. ವಕ್ಫ್ ವಿಚಾರದಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ದಾಖಲಾಗಿದ್ದ ಕೇಸ್ ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಬೊಮ್ಮಾಯಿ ವಿರುದ್ಧದ ಎರಡು ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
ಬೊಮ್ಮಾಯಿ ಹೇಳಿದ್ದ ಹೇಳಿಕೆಯಲ್ಲಿ ಪ್ರಚೋದನಕಾರಿ ಅಂಶಗಳಿಲ್ಲವೆಂದು ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದ್ದರು. ಇದೀಗ ಪ್ರಕರಣ ರದ್ದುಪಡಿಸಿ ನ್ಯಾ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಜಿಲ್ಲೆಯ ಸವಣೂರು ಹಾಗೂ ಶಿಗ್ಗಾಂವಿ ಪೊಲೀಸ್ ಠಾಣೆಗಳಲ್ಲಿ 2024ರಲ್ಲಿ ಪ್ರಕರಣಗಳು ದಾಖಲಾಗಿದ್ದವು. ಬಳಿಕ ಕೇಸ್ ರದ್ದು ಕೋರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಪ್ರಕರಣಗಳನ್ನು ರದ್ದುಗೊಳಿಸಿದೆ. ಆ ಮೂಲಕ ಬಸವರಾಜ ಬೊಮ್ಮಾಯಿಗೆ ಬಿಗ್ ರಿಲೀಫ್ ಸಿಕ್ಕಿದೆ.