ಮಂಗಳೂರು:-ಮಹೇಶ್ ತಿಮರೋಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಉಡುಪಿಯ ಜಿಲ್ಲಾ ಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
Advertisement
ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರಿಗೆ ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಹ್ಮಾವರ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಿದ್ದರು.
ಧರ್ಮಸ್ಥಳ ವಿಚಾರದಲ್ಲಿ ಮಾತನಾಡುವಾಗ ಬಿಜೆಪಿ ನಾಯಕ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿಯ ಬ್ರಹ್ಮಾವರ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿಯನ್ನು ಅರೆಸ್ಟ್ ಮಾಡಿದ್ದರು.
ಪೊಲೀಸರ ನೋಟಿಸ್ಗೆ ಸೂಕ್ತ ಉತ್ತರ ನೀಡದ ಕಾರಣ ಮಹೇಶ್ ತಿಮರೋಡಿ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಇದೀಗ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ತಿಮರೋಡಿ ಕೊಂಚ ರಿಲೀಫ್ ಆಗಿದ್ದಾರೆ.