ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.
ಪ್ರಕರಣ ಸಂಬಂಧ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ಬಳಿಕ, ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನಗರದ 42ನೇ ಎಸಿಜೆಎಂ (ಜನಪ್ರತಿನಿಧಿಗಳ ನ್ಯಾಯಾಲಯ) ಈ ಆದೇಶ ನೀಡಿದೆ.
ಧಾರವಾಡ ಪ್ರವೇಶದ ಸಂದರ್ಭದಲ್ಲಿ ಮೆರವಣಿಗೆ ಸೇರಿದಂತೆ ಯಾವುದೇ ಆಚರಣೆಗಳನ್ನು ನಡೆಸಬಾರದು ಎಂಬ ಷರತ್ತು ವಿಧಿಸಿರುವ ನ್ಯಾಯಾಲಯ, ಈ ಷರತ್ತು ಉಲ್ಲಂಘಿಸಿದಲ್ಲಿ ಜಾಮೀನು ರದ್ದುಪಡಿಸಲಾಗುವುದು ಎಂದು ಸ್ಪಷ್ಟಪಡಿಸಿದೆ.



