• About
  • Advertise
  • Privacy & Policy
  • Contact
Monday, October 26, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home India News

ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್!

Vijaya Sakshi by Vijaya Sakshi
October 26, 2026
in India News
0
ಕರ್ನಾಟಕದಲ್ಲಿ CM ಬದಲಾವಣೆ ಕೂಗು: ರಾಹುಲ್​ ಗಾಂಧಿಗೆ ಪತ್ರ ಬರೆದ ಪಕ್ಷದ ಹಿರಿಯ ನಾಯಕರು!
0
SHARES
1
VIEWS
Share on FacebookShare on Twitter

ಲಕ್ನೋ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಮಾನನಷ್ಟ ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿದ್ದರೆನ್ನಲಾದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ರಾಹುಲ್ ಗಾಂಧಿ ಖುಲಾಸೆಯಾಗಿದ್ದಾರೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಈ ವೇಳೆ ರಾಹುಲ್ ಗಾಂಧಿ ಖುದ್ದು ನ್ಯಾಯಾಲಯದಲ್ಲಿ ಹಾಜರಿದ್ದರು.

ಹೌದು, 2018ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಅಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎಂಬ ಆರೋಪದಡಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು.

ಅಂದಿನ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವಿಜಯ್ ಮಿಶ್ರಾ ಅವರು ಸುಲ್ತಾನ್‌ಪುರ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಬೆಂಗಳೂರಿನ ಪತ್ರಿಕಾಗೋಷ್ಠಿಯಲ್ಲಿ ಅಮಿತ್ ಶಾ ಅವರನ್ನು ರಾಹುಲ್ ಗಾಂಧಿ ಕೊಲೆಗಾರ ಎಂದು ಕರೆದಿದ್ದರು ಎಂಬುದು ದೂರುದಾರರ ಆರೋಪವಾಗಿತ್ತು.

ಅಷ್ಟಕ್ಕೂ ರಾಹುಲ್ ಗಾಂಧಿ ಹೇಳಿದ್ದೇನು ಎಂಬುದನ್ನು ನೋಡುವುದಾದರೆ, ಗುಜರಾತಿನ ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣವನ್ನು ಉಲ್ಲೇಖಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ವ್ಯಕ್ತಿಯನ್ನು ಬಿಜೆಪಿ ತನ್ನ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಿದೆ ಎಂದು ಟೀಕಿಸಿದ್ದರು ಎನ್ನಲಾಗಿದೆ.

2005ರ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಅಮಿತ್ ಶಾ ಅವರ ಹೆಸರು ಕೇಳಿಬಂದಿತ್ತು. ಆದರೆ 2014ರಲ್ಲಿಯೇ ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯ ಅಮಿತ್ ಶಾ ಅವರನ್ನು ಪ್ರಕರಣದಿಂದ ಮುಕ್ತಗೊಳಿಸಿತ್ತು. ನ್ಯಾಯಾಲಯದ ಈ ಆದೇಶದ ಬಳಿಕವೂ ರಾಹುಲ್ ಗಾಂಧಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎಂಬ ವಿಚಾರವನ್ನು ಮಾನನಷ್ಟ ದೂರಿನಲ್ಲಿ ಪ್ರಶ್ನಿಸಲಾಗಿತ್ತು.

ಇದೀಗ ಸುಲ್ತಾನ್‌ಪುರದ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ತೀರ್ಪು ಪ್ರಕಟವಾಗಿದ್ದು, ರಾಹುಲ್ ಗಾಂಧಿ ಖುಲಾಸೆಯಾಗಿದ್ದಾರೆ ಎಂದು ವರದಿಯಾಗಿದೆ. 2018ರ ಚುನಾವಣಾ ಪ್ರಚಾರದ ವೇಳೆ ನೀಡಿದ್ದ ಹೇಳಿಕೆಯಿಂದ ಆರಂಭವಾದ ಕಾನೂನು ಹೋರಾಟದಲ್ಲಿ ಕಾಂಗ್ರೆಸ್ ನಾಯಕನಿಗೆ ಮಹತ್ವದ ನಿರಾಳತೆ ಸಿಕ್ಕಂತಾಗಿದೆ.

Tags: Amit ShahBreakingNewsKarnatakaMP MLA CourtNewsHeadlinesRahul GandhiRahul Gandhi AcquittedRahul Gandhi Defamation CaseSultanpur Court VerdictVijayasakshivijayasakshinews
Previous Post

ಒಂಟಿಯಾಗಿ ವಾಸವಿದ್ದ ವೃದ್ಧೆಯ ಬರ್ಬರ ಹತ್ಯೆ! ಚಿನ್ನಾಭರಣ ದೋಚಿ ಪರಾರಿಯಾದ ದುಷ್ಕರ್ಮಿಗಳು

Next Post

ಸ್ಟಿಂಗ್ ವಿಡಿಯೋದಲ್ಲಿದ್ದ ಮಹಿಳೆ ಹೇಳಿಕೆಗೆ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ..?

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಸುಪ್ರೀಂ ನಿಂದ ರಿಲೀಫ್ ಸಿಕ್ಕರೂ ಸದ್ಯಕ್ಕೆ ಮುಡಾ ಸೈಟ್ ವಾಪಸ್ ಕೇಳಲ್ಲ: ಸಿಎಂ ಪುತ್ರ ಯತೀಂದ್ರ ಸ್ಪಷ್ಟನೆ

ಸ್ಟಿಂಗ್ ವಿಡಿಯೋದಲ್ಲಿದ್ದ ಮಹಿಳೆ ಹೇಳಿಕೆಗೆ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ..?

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ದಳಪತಿ ವಿಜಯ್ ಹಾದಿಯಲ್ಲೇ ತ್ರಿಷಾ ಹೆಜ್ಜೆ? ಕೊಯಮತ್ತೂರಿನಲ್ಲಿ ಭರ್ಜರಿ ಸ್ವಾಗತ, ರಾಜಕೀಯಕ್ಕೆ ಬರ್ತಾರಾ ಸೌತ್ ಬ್ಯೂಟಿ?

ದಳಪತಿ ವಿಜಯ್ ಹಾದಿಯಲ್ಲೇ ತ್ರಿಷಾ ಹೆಜ್ಜೆ? ಕೊಯಮತ್ತೂರಿನಲ್ಲಿ ಭರ್ಜರಿ ಸ್ವಾಗತ, ರಾಜಕೀಯಕ್ಕೆ ಬರ್ತಾರಾ ಸೌತ್ ಬ್ಯೂಟಿ?

October 26, 2026
75ರ ಅಜ್ಜನ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ 30ರ ಯುವತಿ ಯೂಟರ್ನ್! ಮದುವೆಗೂ ಮುನ್ನವೇ ಲವ್ ಸ್ಟೋರಿಗೆ ಬಿಗ್ ಟ್ವಿಸ್ಟ್

75ರ ಅಜ್ಜನ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ 30ರ ಯುವತಿ ಯೂಟರ್ನ್! ಮದುವೆಗೂ ಮುನ್ನವೇ ಲವ್ ಸ್ಟೋರಿಗೆ ಬಿಗ್ ಟ್ವಿಸ್ಟ್

October 26, 2026
Gold-Silver Price: ಚಿನ್ನದ ಬೆಲೆ ಏರಿಕೆ, ಬೆಳ್ಳಿ ಬೆಲೆ ಇಳಿಕೆ: ಇಂದಿನ 10 ಗ್ರಾಂ ಬಂಗಾರದ ಬೆಲೆ ಎಷ್ಟು?

Gold Price Today: ಇಳಿಕೆಯ ಹಾದಿಯಲ್ಲಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ! 10 ಗ್ರಾಂ ಬಂಗಾರದ ದರ ₹1.42 ಲಕ್ಷ ದಾಟಿದೆ, ಬೆಳ್ಳಿ ಬೆಲೆ ಎಷ್ಟಿದೆ?

October 26, 2026
ಸುಪ್ರೀಂ ನಿಂದ ರಿಲೀಫ್ ಸಿಕ್ಕರೂ ಸದ್ಯಕ್ಕೆ ಮುಡಾ ಸೈಟ್ ವಾಪಸ್ ಕೇಳಲ್ಲ: ಸಿಎಂ ಪುತ್ರ ಯತೀಂದ್ರ ಸ್ಪಷ್ಟನೆ

ಸ್ಟಿಂಗ್ ವಿಡಿಯೋದಲ್ಲಿದ್ದ ಮಹಿಳೆ ಹೇಳಿಕೆಗೆ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ..?

October 26, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ದಳಪತಿ ವಿಜಯ್ ಹಾದಿಯಲ್ಲೇ ತ್ರಿಷಾ ಹೆಜ್ಜೆ? ಕೊಯಮತ್ತೂರಿನಲ್ಲಿ ಭರ್ಜರಿ ಸ್ವಾಗತ, ರಾಜಕೀಯಕ್ಕೆ ಬರ್ತಾರಾ ಸೌತ್ ಬ್ಯೂಟಿ?

ದಳಪತಿ ವಿಜಯ್ ಹಾದಿಯಲ್ಲೇ ತ್ರಿಷಾ ಹೆಜ್ಜೆ? ಕೊಯಮತ್ತೂರಿನಲ್ಲಿ ಭರ್ಜರಿ ಸ್ವಾಗತ, ರಾಜಕೀಯಕ್ಕೆ ಬರ್ತಾರಾ ಸೌತ್ ಬ್ಯೂಟಿ?

October 26, 2026
75ರ ಅಜ್ಜನ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ 30ರ ಯುವತಿ ಯೂಟರ್ನ್! ಮದುವೆಗೂ ಮುನ್ನವೇ ಲವ್ ಸ್ಟೋರಿಗೆ ಬಿಗ್ ಟ್ವಿಸ್ಟ್

75ರ ಅಜ್ಜನ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ 30ರ ಯುವತಿ ಯೂಟರ್ನ್! ಮದುವೆಗೂ ಮುನ್ನವೇ ಲವ್ ಸ್ಟೋರಿಗೆ ಬಿಗ್ ಟ್ವಿಸ್ಟ್

October 26, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link