ಮದ್ಯಪಾನ ಪ್ರಿಯರಿಗೆ ಬಿಗ್‌ ಶಾಕ್‌: ಜ.20ರಿಂದ ಬಿಯರ್ ದರ ಏರಿಕೆ

0
Spread the love

ಬೆಂಗಳೂರು: ಬಸ್‌ ಟಿಕೆಟ್‌ ದರ ಏರಿಕೆಯ ಬೆನ್ನಲ್ಲೇ ಇದೀಗ ಮತ್ತೊಂದು ಶಾಕ್‌ ಕೊಡಲು ಸರ್ಕಾರ ಮುಂದಾಗಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ 9 ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ  ಬಜೆಟ್‌ಗೂ ಮುನ್ನವೇ ಬಿಯರ್ ದರವನ್ನು ಶೇ.10ರಷ್ಟು ಹೆಚ್ಚಿಸಲು ಮುಂದಾಗಿದೆ.

Advertisement

ಹೌದು ಪ್ರೀಮಿಯಂ ಮದ್ಯದ ಬಾಟಲ್​ಗೆ ಕನಿಷ್ಠ 10 ರಿಂದ 50 ರೂ.ವರೆಗೆ ಹೆಚ್ಚಳವಾಗಲಿದೆ. ಪ್ರತಿ ಬಿಯರ್​ನಲ್ಲಿನ ಅಲ್ಕೋಹಾಲ್​ ಅಂಶದ ಮೇಲೆ ದರ ಏರಿಕೆಯಾಗಲಿದೆ. ಈ ಪರಿಷ್ಕೃತ ದರ ಜನವರಿ 20 ರಿಂದ ಜಾರಿಗೆ ಬರಲಿದೆ. ಭಾರತೀಯ ನಿರ್ಮಿತ ಮದ್ಯದ (ಐಎಂಎಲ್​) ಮಾರಾಟವನ್ನು ರಾಜ್ಯದಲ್ಲಿ ಉತ್ತೇಜಿಸುವ ಸಲುವಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.

ಐಎಂಎಲ್​​ ಮದ್ಯದ ಬೆಲೆ ಶೇ 25 ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಬಿಯರ್​ ದರ ಪರಿಷ್ಕರಿಸಲು 2024ರ ಆಗಸ್ಟ್​ನಲ್ಲಿಯೇ ಕರಡು ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ನಾನಾ ಕಾರಣಗಳಿಂದ ದರ ಪರಿಷ್ಕರಣೆ ಕಡತಕ್ಕೆ ಮುಖ್ಯಮಂತ್ರಿಗಳು ಸಹಿ ಹಾಕಿರಲಿಲ್ಲ. ಈಗ, ಮುಖ್ಯಮಂತ್ರಿಗಳು ದರ ಏರಿಕೆಗೆ ಸಮ್ಮತಿಸಿರುವ ಹಿನ್ನೆಲೆಯಲ್ಲಿ ಸರ್ಕಾರ ಆದೇಶ ಹೊರಡಿಸಿದೆ.


Spread the love

LEAVE A REPLY

Please enter your comment!
Please enter your name here