ಬೆಂಗಳೂರು:-ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ ಕೊಟ್ಟಿದ್ದಾರೆ.
ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿದ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಹಲವು ಆದೇಶಗಳನ್ನು ನೀಡಿದ್ದಾರೆ.
ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಅವರನ್ನು ಪಟ್ಟಿಯಿಂದ ಹಂತ ಹಂತವಾಗಿ ತೆಗೆದುಹಾಕಬೇಕು. ಆದರೆ, ಒಬ್ಬನೇ ಒಬ್ಬ ಅರ್ಹನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಸೂಚನೆ ಕೊಟ್ಟಿದ್ದಾರೆ.
ಅನರ್ಹ ಬಿಪಿಎಲ್ ಕಾರ್ಡುದಾರರು ಸ್ವಯಂ ಪ್ರೇರಿತವಾಗಿ ತಮ್ಮ ಕಾರ್ಡ್‍ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು. ಅದಾದ ನಂತರ ಅಂಥವರಿಗೆ ನೊಟೀಸ್ ನೀಡಿ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.