ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಬಿಗ್ ಶಾಕ್: KPSC ಗ್ರೂಪ್ ಬಿ ಪರೀಕ್ಷೆ ಮುಂದೂಡಿಕೆ!

0
Spread the love

ಬೆಂಗಳೂರು:- ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಕೆಪಿಎಸ್​ಸಿ ಮತ್ತೆ ಶಾಕ್ ಕೊಟ್ಟಿದ್ದು, ಕೊನೆ ಕ್ಷಣದಲ್ಲಿ ಕೆಪಿಎಸ್​ಸಿ ಗ್ರೂಪ್ ಬಿ ಪರೀಕ್ಷೆ ಮುಂದೂಡಲಾಗಿದೆ.

Advertisement

ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆಯನ್ನು ಸರ್ಕಾರ ನೀಡಿದೆ. ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿ ಅನ್ವಯವಾಗುವಂತೆ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ನಾಳೆಯಿಂದ ನಡೆಯಬೇಕಿದ್ದ ಕೆಪಿಎಸ್ಸಿ ಗ್ರೂಪ್ ಬಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ.

ಸರ್ಕಾರದ ಈ ಆದೇಶದಿಂದ ಎಲ್ಲಾ ಹುದ್ದಿಗಳಿಗೂ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ. ನಾಳೆ ಕಡ್ಡಾಯ ಕನ್ನಡ ಹಾಗೂ ಭಾನುವಾರ ಸ್ಪರ್ಧಾತ್ಮಕ ಪರೀಕ್ಷೆ ಇತ್ತು. ಆದರೆ ಸರ್ಕಾರ ಈ ನಿರ್ಧಾರದಿಂದ ಪರೀಕ್ಷೆ ಮುಂದೂಡಲಾಗಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೆಪಿಎಸ್​ಸಿ ನಾಳೆ ನಡೆಯಬೇಕಿದ್ದ ಕೆಪಿಎಸ್​ಸಿಯ ವಿವಿಧ ಗ್ರೂಪ್-ಬಿ ಹುದ್ದೆಗಳ ಪರೀಕ್ಷೆ ಮುಂದೂಡಲಾಗಿದೆ. 14-09-2024 ಮತ್ತು 15-09-2024ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ದಿನಾಂಕ ನಿಗದಿಯಾಗಿತ್ತು. ಅಭ್ಯರ್ಥಿಗಳನ್ನು ಪರೀಕ್ಷಾ ಉಪ ಕೇಂದ್ರಗಳ ಹಂಚಿಕೆ ಕೂಡ ಮಾಡಲಾಗಿತ್ತು.

ಈ ಮಧ್ಯೆ ದಿನಾಂಕ 10-09-2024ರಂದು ಕರ್ನಾಟಕ ಸರ್ಕಾರ ತನ್ನ ನಡಾವಳಿಗಳಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಟ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದೆ.


Spread the love

LEAVE A REPLY

Please enter your comment!
Please enter your name here