ರೇಣುಕಾಸ್ವಾಮಿ ಕೊಲೆ ಕೇಸ್ನ ಎ2 ಆರೋಪಿ ದರ್ಶನ್ ಸದ್ಯ ಅನಾರೋಗ್ಯದ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ದರ್ಶನ್ ಮಧ್ಯಂತರ ಜಾಮೀನು ಮುಗಿಯುವ ಹಂತದಲ್ಲಿದ್ದು ಮತ್ತಷ್ಟು ದಿನಗಳ ಕಾಲ ವಿಸ್ತರಿಸುವ ಸಾಧ್ಯತೆ ಇದೆ. ಈ ಮಧ್ಯೆ ದರ್ಶನ್ ನೀಡಲಾಗಿರುವ ಮೆಡಿಕಲ್ ಬೇಲ್ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಫಿಸಿಯೋ ಥೆರೆಪಿ ಮಾಡಿಸಲಾಗುತ್ತಿದ್ದು, ಶೀಘ್ರವೇ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ದರ್ಶನ್ ಮಧ್ಯಂತರ ಜಾಮೀನು ಅರ್ಜಿಯನ್ನು ರದ್ದು ಮಾಡುವಂತೆ ಕೋರಿ ತನಿಖಾ ತಂಡ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದೆ.
ದರ್ಶನ್ ಅವರು ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದರು. ಬೆನ್ನುನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೆ ಇದ್ದರೆ ಪಾರ್ಶವಾಯು ಆಗುವ ಸಾಧ್ಯತೆ ಇದೆ ಎಂದು ವೈದ್ಯರು ಆತಂಕ ಹೊರಹಾಕಿದ ರಿಪೋರ್ಟ್ ನೀಡಿ ಜಾಮೀನು ಪಡೆಯಲಾಗಿತ್ತು. ದರ್ಶನ್ಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ರದ್ದು ಮಾಡಬೇಕು ಎಂದು ಕೋರಿ ರಾಜ್ಯ ಸರ್ಕಾರ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದೆ.
ಒಂದು ಕಡೆ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ. ಅವರಿಗೆ ಜಾಮೀನು ನೀಡಬೇಕೋ ಅಥವಾ ಬೇಡವೋ ಎಂಬ ಬಗ್ಗೆ ವಾದ-ವಿವಾದ ನಡೆಯುತ್ತಿದೆ. ಹೀಗಿರುವಾಗಲೇ ಅವರ ಮಧ್ಯಂತರ ಜಾಮೀನು ರದ್ದತಿ ಕೋರಿ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಶುಕ್ರವಾರ (ಡಿಸೆಂಬರ್ 6) ಅಥವಾ ಸೋಮವಾರ (ಡಿಸೆಂಬರ್ 9) ಅರ್ಜಿ ವಿಚಾರಣೆಗೆ ಬರೋ ಸಾಧ್ಯತೆ ಇದೆ.
ದರ್ಶನ್ ಅವರಿಗೆ ತೀವ್ರ ರಕ್ತದೊತ್ತಡ ಇರುವ ಕಾರಣದಿಂದ ಅವರು ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗುತ್ತಿಲ್ಲ. ಬಿಪಿ ನಾರ್ಮಲ್ ಬಂದ ಬಳಿಕ ಶಸ್ತ್ರ ಚಿಕಿತ್ಸೆ ಮಾಡಲಾಗುವುದು ಎಂದು ವೈದ್ಯರು ಹೇಳಿದ್ದಾರೆ.
ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಎಂಬಾತ ಕೆಟ್ಟದಾಗಿ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ಆತನನ್ನು ದರ್ಶನ್ ಗ್ಯಾಂಗ್ ಚಿತ್ರದುರ್ಗದಿಂದ ಕರೆತಂದಿದ್ರು. ಜೂನ್ 8ರಂದು ರೇಣುಕಾಸ್ವಾಮಿ ಕೊಲೆ ನಡೆದಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಬಯಲಾಗಿದೆ. ಕೊಲೆ ನಡೆದ 2 ದಿನಗಳ ಬಳಿಕ ನಟ ದರ್ಶನ್ ನನ್ನು ಪೊಲೀಸರು ಬಂಧಿಸಿದ್ದರು.