ಕಲಬುರ್ಗಿ:- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಸುಳಿವು ಕೊಟ್ಟಿದ್ದಾರೆ. ಈ ಹಿನ್ನೆಲೆ DCM ಡಿಕೆಶಿಗೆ ಬಿಗ್ ಶಾಕ್ ಎದುರಾದಂತಾಗಿದೆ.
ಕಲಬುರ್ಗಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ ಅವರು, ದೇಶಾದ್ಯಂತ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ಹಂತಹಂತವಾಗಿ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಮೂರು ರಾಜ್ಯಗಳಲ್ಲಿ ಪಿಸಿಸಿ ಅಧ್ಯಕ್ಷರ ನೇಮಕ ಮಾಡಲಾಗಿದೆ. ಆದಷ್ಟು ಬೇಗ ಹಂತ ಹಂತವಾಗಿ ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ನೇಮಕ ನಡೆಯಲಿದೆ. ಇದಕ್ಕೆ ಕರ್ನಾಟಕ ಹೊರತಾಗಿಲ್ಲ ಎಂದರು. ಈ ಮೂಲಕ ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷರ ಸುಳಿವು ಕೊಟ್ಟಿದ್ದಾರೆ.
ಇತ್ತೀಚೆಗೆ ದೆಹಲಿಯ ತಮ್ಮ ನಿವಾಸದಲ್ಲಿ ರಾಜ್ಯದ ಗೃಹ ಸಚಿವ ಪರಮೇಶ್ವರ್ ಹಾಗೂ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ತಮ್ಮನ್ನು ಭೇಟಿ ಮಾಡಿ ಚರ್ಚಿಸಿದ ಕುರಿತು ಸುದ್ದಿಗಾರರು ಪ್ರಸ್ತಾಪಿಸಿದಾಗ, ನಾನು ಈ ರಾಜ್ಯದವನು ಎಐಸಿಸಿ ಅಧ್ಯಕ್ಷನಾಗಿದ್ದೇನೆ. ಹೀಗಾಗಿ ನಮ್ಮ ರಾಜ್ಯದ ನಾಯಕರು ನನ್ನ ಭೇಟಿಯಾಗಲು ಬರುತ್ತಾರೆ ಎಂದು ಹೇಳಿದರು.