ಕಾರವಾರ:- ಬೆಳ್ಳಂ ಬೆಳಗ್ಗೆ ಕಾಂಗ್ರೆಸ್ ಶಾಸಕನಿಗೆ ಇಡಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ.
ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ಮನೆಯಲ್ಲಿ ಇಲ್ಲದೇ ಇದ್ದಾಗ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಹೌದು, ನಾಲ್ಕೈದು ಕಾರುಗಳಲ್ಲಿ ಎಂಟ್ರಿ ಕೊಟ್ಟ ಇಡಿ ಅಧಿಕಾರಿಗಳು, ಇಲ್ಲಿನ ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಶಾಸಕ ಸತೀಶ್ ಸೈಲ್ ಎಂಸಿಎ ಅಧ್ಯಕ್ಷರೂ ಆಗಿದ್ದರು. ಅಧಿವೇಶನದ ಹಿನ್ನೆಲೆಯಲ್ಲಿ ಶಾಸಕ ಸತೀಶ್ ಸೈಲ್ ಬೆಂಗಳೂರಿಗೆ ತೆರಳಿದ್ದಾರೆ. ಇದೇ ವೇಳೆ ಏಕಾಏಕಿ ಇಡಿ ಅಧಿಕಾರಿಗಳು ಸತೀಶ್ ಸೈಲ್ ಮನೆಗೆ ಎಂಟ್ರಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಏಳು ಇಡಿ ಅಧಿಕಾರಿಗಳು ಕಾರವಾರದ ಸದಾಶಿವಗಡ ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ಸೈಲ್ ಮನೆಯಲ್ಲಿ ತಪಾಸಣೆ ಕೈಗೊಂಡಿದ್ದಾರೆ. ಇಬ್ಬರು ಸಿಐಎಎಸ್‌ಎಫ್ ಅಧಿಕಾರಿಗಳನ್ನು ಮನೆಯ ಹೊರಗೆ ನಿಯೋಜಿಸಲಾಗಿದೆ.
ಅಕ್ರಮ ಅದಿರು ಪ್ರಕರಣದಲ್ಲಿ ಸತೀಶ ಸೈಲ್‌ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಹೈಕೋರ್ಟ್ ಅದಕ್ಕೆ ತಡೆ ನೀಡಿದ್ದು, ಸದ್ಯ ಸೈಲ್ ರಿಲೀಫ್ ಆಗಿದ್ದಾರೆ. ಆದಾಯಕ್ಕಿಂತ ಅಧಿಕ ಹಣ ಮಾಡಿರುವ ಆರೋಪ ಸಹ ಇವರ ಮೇಲೆ ಇದ್ದು, ಇದೀಗ ಇ.ಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇದೀಗ ಹೊಸ ಸವಾಲು ಎದುರಾಗಿದೆ.