‘ಥಗ್ ಲೈಫ್’ ವಿಚಾರದಲ್ಲಿ ಕಮಲ್ ಹಾಸನ್’ಗೆ ಬಿಗ್ ಶಾಕ್: ಸುಪ್ರೀಂನಲ್ಲೂ ಹಿನ್ನಡೆ

0
Spread the love

ನವದೆಹಲಿ: ಕಮಲ್ ಹಾಸನ್ ಅವರ ‘ಥಗ್ ಲೈಫ್’ ಚಿತ್ರದ ಕರ್ನಾಟಕದಲ್ಲಿ ಬಿಡುಗಡೆ ಆಗಿಲ್ಲ. ಕನ್ನಡದ ಮೇಲಿನ ಅವರ ವಿವಾದಾತ್ಮಕ ಹೇಳಿಕೆಯಿಂದಾಗಿ ಚಿತ್ರಕ್ಕೆ ವಿರೋಧ ವ್ಯಕ್ತವಾಗಿದೆ. ಹೈಕೋರ್ಟ್‌ನಲ್ಲಿ ಪ್ರಕರಣ ವಿಚಾರಣೆಯಲ್ಲಿದ್ದರೂ, ಸುಪ್ರೀಂಕೋರ್ಟ್‌ನಲ್ಲಿ ಅವರು ಮನವಿ ಮಾಡಿದ್ದಾರೆ.

Advertisement

ಹೌದು ಕರ್ನಾಟಕದಲ್ಲಿ ಕಮಲ್ ಹಾಸನ್​ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ರಕ್ಷಣೆ ನೀಡಬೇಕು ಎಂದು ಕೋರಿ ಕರ್ನಾಟಕ ಚಿತ್ರಮಂದಿರಗಳ ಸಂಘ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಆದರೆ, ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ವ್ಯಕ್ತಪಡಿಸಿದೆ

ಸುಪ್ರೀಂಕೋರ್ಟ್ ಕಲಾಪ ಪ್ರಾರಂಭವಾಗುತ್ತಿದ್ದಂತೆ, ಸಂಘದ ಪರ ವಕೀಲರು ನ್ಯಾಯಮೂರ್ತಿ ಮಿಶ್ರಾ ಅವರಿದ್ದ ವಿಭಾಗೀಯ ಪೀಠಕ್ಕೆ, ಅರ್ಜಿ ತುರ್ತು ವಿಚಾರಣೆಗೆ ಪರಿಗಣಿಸಬೇಕು ಎಂದು ಮನವಿ ಮಾಡಿದರು. ಅಲ್ಲದೆ, ಚಿತ್ರದ ಪ್ರದರ್ಶನಕ್ಕೆ ಅವಕಾಶ ಸಿಕ್ಕಿಲ್ಲ, ಬೆದರಿಕೆ ಇದೆ. ಆದ್ದರಿಂದ ತುರ್ತು ವಿಚಾರಣೆಗೆ ಪರಿಗಣಿಸಬೇಕು ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವುದಕ್ಕೆ ಅವಕಾಶವಿಲ್ಲ. ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣಾ ಹಂತದಲ್ಲಿದೆ. ಅಲ್ಲಿಯೇ ವಿಷಯವನ್ನು ಪ್ರಸ್ತಾಪಿಸಬಹುದು ಎಂದು ತಿಳಿಸಿ, ಅರ್ಜಿದಾರರ ಮನವಿಯನ್ನು ತಿರಸ್ಕರಿಸಿದೆ.

 


Spread the love

LEAVE A REPLY

Please enter your comment!
Please enter your name here