ಬೆಂಗಳೂರು:- ಮೆಟ್ರೋ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿ ಒಂದು ಹೊರ ಬಿದ್ದಿದ್ದು, 2025ರಿಂದ ಟಿಕೆಟ್ ದರ ಹೆಚ್ಚಳ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಏಳು ವರ್ಷಗಳಿಂದ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿರಲಿಲ್ಲವೆಂದು ಆ ಬಗ್ಗೆ ಪರಾಮರ್ಶೆ ನಡೆಸಲು ಬಿಎಂಆರ್ಸಿಎಲ್ ಸಮಿತಿ ರಚನೆ ಮಾಡಿತ್ತು.
ಮೆಟ್ರೋ ಟಿಕೆಟ್ ದರ ಹೆಚ್ಚಳ ವಿಚಾರವಾಗಿ ಅಕ್ಟೋಬರ್ 28ರ ವರೆಗೆ ಪ್ರಯಾಣಿಕರ ಅಭಿಪ್ರಾಯ ತಿಳಿಸಲು ಅವಕಾಶ ನೀಡಲಾಗಿತ್ತು. ಪ್ರಯಾಣಿಕರ ಅಭಿಪ್ರಾಯವನ್ನು ಸಂಗ್ರಹಿಸಿರುವ ಸಮಿತಿ, ಆ ವರದಿಯನ್ನು ಈ ತಿಂಗಳ 3 ನೇ ವಾರದಲ್ಲಿ ಬಿಎಂಆರ್ಸಿಎಲ್ಗೆ ಸಲ್ಲಿಸಲಿದೆ.
ಮೆಟ್ರೋ ಟಿಕೆಟ್ ದರ ಶೇ 15 ರಷ್ಟು ಹೆಚ್ಚಳಕ್ಕೆ ನಮ್ಮ ಮೆಟ್ರೋ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ. ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದೇ ಆದಲ್ಲಿ ಜನವರಿಯಿಂದ ದರ ಹೆಚ್ಚಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಅಭಿಪ್ರಾಯ ಅವಧಿಯಲ್ಲಿ ಬಹುತೇಕರು ದರ ಹೆಚ್ಚಳಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ. ಜನರ ಆಕ್ಷೇಪದ ನಡುವೆಯೂ ಟಿಕೆಟ್ ದರ ಹೆಚ್ಚಳಕ್ಕೆ ಸಮಿತಿ ಅಸ್ತು ಎಂದಿದೆ. ಹೀಗಾಗಿ ಶೇ 15 ರಷ್ಟು ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಸಾಧ್ಯತೆ ಇದೆ.