ರಾಮನಗರ: ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದೆ. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್, ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಮಧ್ಯೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿದೆ.
ಚನ್ನಪಟ್ಟಣದಲ್ಲಿ ಎಂಟನೇ ಸುತ್ತಿನ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಸಿಪಿ ಯೋಗೇಶ್ವರ 11,178 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದರು. ಇದೀಗ 10ನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಸಿಪಿ ಯೋಗೇಶ್ವರ್ 18,898 ಮತಗಳ ಅಂತರಿಂದ ಮುನ್ನಡೆ ಸಾಧಿಸಿದ್ದಾರೆ. ಇದರಿಂದ ನಿಖಿಲ್ ಕುಮಾರಸ್ವಾಮಿಗೆ ಶಾಕ್ ಆಗಿದೆ.



