ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಹಾಸನದ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಕೊರ್ಟ್ ಮತ್ತೊಂದು ಶಾಕ್ ಕೊಟ್ಟಿದೆ. ಹೌದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ.
ಪ್ರಜ್ವಲ್ ರೇವಣ್ಣ ತಂದೆ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಕಳೆದ ಏಪ್ರಿಲ್ 28ರಂದು ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ದಾಖಲಿಸಿದ್ದರು. ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ದೂರು ದಾಖಲಾಗಿತ್ತು.
ಎಫ್‌ಐಆರ್‌ನಲ್ಲಿ ಹೆಚ್.ಡಿ.ರೇವಣ್ಣ ಎ1 ಮತ್ತು ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದಾರೆ. 354 A, 354 D, 509 ಅಡಿ ಪ್ರಕರಣ ದಾಖಲಾಗಿತ್ತು. 2015 ರಲ್ಲಿ ಹೆಚ್.ಡಿ.ರೇವಣ್ಣ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ನೀಡಿದ್ದರು. ತಂದೆ ಮತ್ತು ಮಗನ ವಿರುದ್ಧ ಸಂತ್ರಸ್ತೆ ಗಂಭೀರ ಆರೋಪಗಳನ್ನು ಮಾಡಿದ್ದರು.