ಕ್ರಿಕೆಟ್ ಲೋಕದಲ್ಲಿ ಹಿಟ್ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ರೋಹಿತ್ ಶರ್ಮಾ ಅವರು ದಿಢೀರ್ ಆಗಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ಕೊಟ್ಟಿದ್ದಾರೆ.
ಜೂನ್ 20 ರಿಂದ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿ ಆರಂಭಗೊಳ್ಳುತ್ತಿದೆ. ಇಂಗ್ಲೆಂಡ್ ವಿರುದ್ದದ ಸರಣಿಗೆ ರೋಹಿತ್ ಶರ್ಮಾ ನಾಯಕತ್ವಕ್ಕಿಂತ ಹೊಸ ನಾಯಕತ್ವದಲ್ಲಿ ತಂಡ ಕಣಕ್ಕಿಳಿಸಲು ಆಯ್ಕೆ ಸಮಿತಿ ನಿರ್ಧರಿಸಿದೆ. ಈ ಕುರಿತು ಬಿಸಿಸಿಐ ಜೊತೆ ಸಭೆ ನಡೆಸಿ ವರದಿ ನೀಡಿದೆ. ಈ ಬೆಳವಣಿಗೆ ನಡೆಯುತ್ತಿದ್ದಂತೆ ರೋಹಿತ್ ಶರ್ಮಾ ಟೆಸ್ಟ್ ಮಾದರಿಗೆ ವಿದಾಯ ಹೇಳಿ, ದೂರ ಸರಿದಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ವೊಂದನ್ನು ಮಾಡಿರುವ ಹಿಟ್ ಮ್ಯಾನ್, ನಾನು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತಿದ್ದೇನೆ ಎಂದು ನಿಮಗೆಲ್ಲರಿಗೂ ಹೇಳಲು ಬಯಸುತ್ತೇನೆ. ನನ್ನ ದೇಶವನ್ನು ಬಿಳಿ ಬಟ್ಟೆ ಧರಿಸಿ ಪ್ರತಿನಿಧಿಸುವುದು ನನಗೆ ದೊಡ್ಡ ಗೌರವವಾಗಿದೆ. ಇಷ್ಟು ವರ್ಷಗಳ ಕಾಲ ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ಏಕದಿನ ಮಾದರಿಯಲ್ಲಿ ದೇಶವನ್ನು ಪ್ರತಿನಿಧಿಸುವುದನ್ನು ಮುಂದುವರೆಸುತ್ತೇನೆ’ ಎಂದು ರೋಹಿತ್ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.