ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ಅವರಿಗೆ ಸಂಕಷ್ಟ ಎದುರಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ಬೆಟ್ಟಿಂಗ್ ಆ್ಯಪ್ ಪ್ರಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಧವನ್ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಕರೆದಿದೆ. ವಾಸ್ತವವಾಗಿ ಶಿಖರ್ ಧವನ್ ಸೋಶಿಯಲ್ ಮೀಡಿಯಾದಲ್ಲಿ ಆನ್‌ಲೈನ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್ 1xBet ನ ಪ್ರಚಾರ ಮಾಡಿದ್ದರು. ಹೀಗಾಗಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಲು ಶಿಖರ್ ಧವನ್ ಅವರನ್ನು ವಿಚಾರಣೆಗೆ ಕರೆಯಲಾಗಿದೆ ಎಂದು ವರದಿಯಾಗಿದೆ.
ಕಳೆದ ವರ್ಷದಿಂದ, ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ್ದಕ್ಕಾಗಿ ಅನೇಕ ಬಾಲಿವುಡ್ ಮತ್ತು ದಕ್ಷಿಣ ಭಾರತದ ಚಲನಚಿತ್ರ ನಟರು ಮತ್ತು ಕ್ರಿಕೆಟಿಗರು ತನಿಖೆಗೆ ಒಳಗಾಗಿದ್ದಾರೆ. ಈ ಪಟ್ಟಿಯಲ್ಲಿ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ಹರ್ಭಜನ್ ಸಿಂಗ್, ಊರ್ವಶಿ ರೌಟೇಲಾ ಮತ್ತು ಸುರೇಶ್ ರೈನಾ ಸೇರಿದ್ದಾರೆ. ಈಗ ಶಿಖರ್ ಧವನ್ ಅವರ ಹೆಸರೂ ಇದಕ್ಕೆ ಸೇರ್ಪಡೆಯಾಗಿದೆ. ಇತ್ತೀಚೆಗೆ, ಭಾರತದ ಮಾಜಿ ಕ್ರಿಕೆಟಿಗರಾದ ಸುರೇಶ್ ರೈನಾ ಮತ್ತು ಹರ್ಭಜನ್ ಸಿಂಗ್ ಅವರು ಇಡಿ ಮುಂದೆ ತಮ್ಮ ಹೇಳಿಕೆಗಳನ್ನು ದಾಖಲಿಸಿದ್ದರು. ಈಗ ಈ ಪ್ರಕರಣದಲ್ಲಿ ಶಿಖರ್ ಧವನ್ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ.