ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಗೆ ಬಿಗ್ ಶಾಕ್: ಜಾಮೀನು ರಹಿತ ವಾರಂಟ್‌ ಜಾರಿ!

0
Spread the love

ಬೆಂಗಳೂರು:- ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿ ಮಾಡಲಾಗಿದೆ.

Advertisement

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ವಿಚಾರಣೆಗೆ ಗೈರಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌ ಹೊರಡಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶಿಸಿದೆ.

ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ತಬಸ್ಸುಮ್ ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ಬೆಂಗಳೂರಿನ 42ನೇ ACMM ಕೋರ್ಟ್ ಜಡ್ಜ್ ಕೆ.ಎನ್.ಶಿವಕುಮಾರ್ ಅವರು ಇಂದು ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

ದಿನೇಶ್‌ ಗುಂಡೂರಾವ್‌ ಪತ್ನಿ ತಬಸುಮ್‌ ಸಲ್ಲಿಸಿದ್ದ ಖಾಸಗಿ ದೂರನ್ನು ಆಗಸ್ಟ್‌ 29 ರಂದು ಮಾನ್ಯ ಮಾಡಿದ್ದ ನ್ಯಾಯಾಲಯ, ಅಕ್ಟೋಬರ್‌ 16 ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಶಾಸಕ ಯತ್ನಾಳ್​ಗೆ ಸಮನ್ಸ್‌ ಜಾರಿಗೊಳಿಸಿತ್ತು.

ಆದ್ರೆ ಯತ್ನಾಳ್ ಇಂದು ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್‌ 28 ಕ್ಕೆ ಮುಂದೂಡಿದೆ.


Spread the love

LEAVE A REPLY

Please enter your comment!
Please enter your name here