ಬೆಂಗಳೂರು:- ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ವಿಚಾರದಲ್ಲಿ ತೀವ್ರ ಗೊಂದಲ ಸೃಷ್ಟಿಯಾಗಿದ್ದು, ಸಾಕಷ್ಟು ಕಾರ್ಡ್‌ಗಳ ರದ್ದತಿ ಬೆನ್ನಲ್ಲೇ ಜನತೆಯಲ್ಲಿ ಆತಂಕವೂ ಹೆಚ್ಚಾಗಿದೆ.
ಇದರ ಜೊತೆಯಲ್ಲೇ ಇದೀಗ ಕರ್ನಾಟಕ ಜನತೆಗೆ ಬಿಗ್ ಶಾಕಿಂಗ್ ಸುದ್ದಿ ಹೊರ ಬಿದ್ದಿದ್ದು, ರಾಜ್ಯದಲ್ಲಿ ಬರೋಬ್ಬರಿ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ದಾರರು ಇದ್ದಾರೆ ಎಂಬ ಸತ್ಯಸಂಗತಿ ಬಯಲಾಗಿದೆ.
ಕಳೆದ ಆಗಸ್ಟ್ ತಿಂಗಳಿನಲ್ಲೇ ಆಹಾರ ಇಲಾಖೆಗೆ ಇ ಗವರ್ನೆನ್ಸ್ ಇಲಾಖೆ ಮಾಹಿತಿ ಕೊಟ್ಟಿದೆ. ಇದೇ ಮಾಹಿತಿ ಇಟ್ಟುಕೊಂಡೇ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳ ರದ್ದಾಗಲಿದೆಯೇ ಎಂಬ ಅನುಮಾನ ಈಗ ಮೂಡಿದೆ.
ಕಲಬುರಗಿ ಜಿಲ್ಲೆಯಲ್ಲೇ ಅತಿಗಹೆಚ್ಚು ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಟ್ಟಿರುವ ಮಾಹಿತಿ ಸಿಕ್ಕಿದೆ. ಕಲಬುರಗಿಯಲ್ಲಿ 78,058 ಮಂದಿ ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 65,563 ಅನರ್ಹರ ಬಳಿ ಬಿಪಿಎಲ್ ಕಾರ್ಡ್ ಇದೆ.
ಬೆಂಗಳೂರು ಪೂರ್ವದಲ್ಲಿ 9,129 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬೆಂಗಳೂರು ಉತ್ತರದಲ್ಲಿ 17,382 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬೆಂಗಳೂರು ದಕ್ಷಿಣದಲ್ಲಿ 11,447 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ.
ಏತನ್ಮಧ್ಯೆ, ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಭರವಸೆ ನೀಡಿದ್ದಾರೆ. ಅರ್ಹ ಬಿಪಿಎಲ್ ಕಾರ್ಡ್ದಾರರು ಆತಂಕ ಆತಂಕಕ್ಕೊಳಗಾಗುವುದು ಬೇಡ ಎಂದಿದ್ದಾರೆ.