ಧರ್ಮಸ್ಥಳ ಬುರುಡೆ ಕೇಸ್ ಗೆ ಬಿಗ್ ಟ್ವಿಸ್ಟ್: ಸುಳ್ಳಿನ ಕಥೆ ಹೆಣೆದಿದ್ದ ಮಾಸ್ಕ್ ಮ್ಯಾನ್ ಅರೆಸ್ಟ್!

0
Spread the love

ಮಂಗಳೂರು:- ಧರ್ಮಸ್ಥಳ ವ್ಯಾಪ್ತಿಯಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೆ ಎಂದು ಕಥೆ ಕಟ್ಟಿದ್ದ ಮಾಸ್ಕ್ ಮ್ಯಾನ್ ನನ್ನು ಸತತ ವಿಚಾರಣೆ ಬಳಿಕ SIT ವಶಕ್ಕೆ ಪಡೆದಿದೆ.

Advertisement

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಸುಳ್ಳುಗಳ ಸರಮಾಲೆ ಹೆಣೆದು ಕಥೆ ಕಟ್ಟಿದ್ದ ಮುಸುಕುಧಾರಿಯನ್ನ ವಿಶೇಷ ತನಿಖಾ ತಂಡ ಕೊನೆಗೂ ಬಂಧಿಸಿದೆ. ಸತತ ವಿಚಾರಣೆಯ ಬಳಿಕ ಮಾಸ್ಕ್‌ ಮ್ಯಾನ್‌ನನ್ನ ತನಿಖಾ ತಂಡ ಬಂಧಿಸಿದೆ.

ಅನಾಮಿಕ ತೋರಿಸಿದ 17 ಪಾಯಿಂಟ್‌ಗಳಲ್ಲಿ ಏನೂ ಸಿಗದಿದ್ದ ಹಿನ್ನೆಲೆ ಎಸ್‌ಐಟಿ ತಂಡ ಸಮಾಧಿ ಶೋಧವನ್ನು ಸ್ಥಗಿತಗೊಳಿಸಿ ಮಾಸ್ಕ್‌ ಮ್ಯಾನ್‌ ವಿರುದ್ಧವೇ ರಿವರ್ಸ್‌ ತನಿಖೆ ಶುರು ಮಾಡಿತ್ತು. ಪ್ರಕರಣದ ತನಿಖಾಧಿಕಾರಿ ಜಿತೇಂದ್ರ ದಯಾಮ ಮತ್ತು ಸುಮಾರು 25 ಪೊಲೀಸರ ತಂಡ ಎಸ್‌ಐಟಿ ಠಾಣೆಯಲ್ಲಿ ತೀವ್ರ ವಿಚಾರಣೆ ನಡೆಸಿದ್ದರು. ವಿವಿಧ ಆಯಾಮಗಳಲ್ಲಿ ಅನಾಮಿಕನ ಮುಂದೆ ಪ್ರಶ್ನೆಗಳನ್ನ ಇಟ್ಟಿದ್ದರು.

ಅನಾಮಿಕ ದೂರುದಾರನ ಮುಂದೆ ವೀಡಿಯೋ ಪ್ರದರ್ಶನ ಮಾಡಿ ತನಿಖೆ ಪ್ರಕ್ರಿಯೆಯನ್ನೂ ಮುಂದುವರಿಸಿದ್ದರು. ಇಷ್ಟೆಲ್ಲಾ ತನಿಖೆ ಬಳಿಕ ಮಾಸ್ಕ್‌ ಮ್ಯಾನ್‌ ಹೆಣೆದಿದ್ದು ಸುಳ್ಳಿನ ಬಲೆ ಎಂಬುದು ಸಾಬೀತಾಗಿದೆ. ಮುಸುಕುಧಾರಿ ಹೇಳಿದ್ದೆಲ್ಲ ಸುಳ್ಳು ಎಂದು ತಿಳಿಯುತ್ತಿದ್ದಂತೆ ಆತನನ್ನ ಬಂಧಿಸಿದ್ದಾರೆ. ಇಂದು ಕೋರ್ಟ್‌ಗೆ ಹಾಜರುಪಡಿಸಿ ಬಳಿಕ ಆತನನ್ನ ಕಸ್ಟಡಿ ವಿಚಾರಣೆಗೆ ಪಡೆಯುವ ಸಾಧ್ಯತೆಯಿದೆ.


Spread the love

LEAVE A REPLY

Please enter your comment!
Please enter your name here