ಧರ್ಮಸ್ಥಳ ಕೇಸ್ʼ​ಗೆ ಬಿಗ್​ ಟ್ವಿಸ್ಟ್: ಚಿನ್ನಯ್ಯ ವಿರುದ್ಧ ಸೌಜನ್ಯಾ ತಾಯಿ ದೂರು..!

0
Spread the love

ಮಂಗಳೂರು: ತಲೆಬುರುಡೆ ಪ್ರಕರಣ ದಿನಕ್ಕೊಂದು ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ Sit ತನಿಖೆ ನಡೆಯುತ್ತಿದೆ. ಇದರ ನಡುವೆ ಬೆಳ್ತಂಗಡಿಯ ಎಸ್ ಐಟಿ ಕಚೇರಿಗೆ ಸೌಜನ್ಯಾ ತಾಯಿ ಕುಸುಮಾ ಆಗಮಿಸಿ, ಚಿನ್ನಯ್ಯನ ವಿರುದ್ಧ ದೂರು ನೀಡಿದ್ದಾರೆ.

Advertisement

ಹೌದು ಮಾಸ್ಕ್ ಮ್ಯಾನ್​ ಚಿನ್ನಯ್ಯ ಯೂಟ್ಯೂಬ್​ ಚಾನಲ್​ಗೆ ನೀಡಿದ ಸಂದರ್ಶನದಲ್ಲಿ, ಸೌಜನ್ಯ ಅವರ ಮೃತದೇಹವನ್ನು ಎತ್ತಿಕೊಂಡು ಹೋಗಿರುವುದನ್ನು ನಾನು ನೋಡಿದ್ದೇನೆ” ಎಂದು ಹೇಳಿಕೆ ನೀಡಿದ್ದ. ಈ ಹೇಳಿಕೆಯ ಆಧಾರದ ಮೇಲೆ ಕುಸುಮಾವತಿ ಅವರು ಎಸ್‌ಐಟಿ ಎಸ್ಪಿ ಸೈಮನ್ ಅವರಿಗೆ ದೂರು ಸಲ್ಲಿಸಿದ್ದಾರೆ.

ಆ ಹೇಳಿಕೆ ಆಧಾರದ ಮೇಲೆ ಚಿನ್ನಯ್ಯನನ್ನು ತೀವ್ರವಾಗಿ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದಾರೆ. ಚಿನ್ನಯ್ಯನ ಹೇಳಿಕೆ ಸೌಜನ್ಯ ಪ್ರಕರಣಕ್ಕೆ ಮತ್ತಷ್ಟು ಬಲ ನೀಡಿದೆ ಮತ್ತು ಹೊಸ ತಿರುವು ನೀಡಿದೆ. ಕುಸುಮಾವತಿ ಅವರ ದೂರಿನ ಹಿನ್ನೆಲೆಯಲ್ಲಿ ಎಸ್‌ಐಟಿ ಚಿನ್ನಯ್ಯನನ್ನು ವಿಚಾರಣೆಗೊಳಪಡಿಸಿದರೆ,

ಈ ಪ್ರಕರಣದ ಬಗ್ಗೆ ಇನ್ನಷ್ಟು ಸತ್ಯ ಹೊರಬರುವ ಸಾಧ್ಯತೆ ಇದೆ. 2012ರ ಅಕ್ಟೋಬರ್‌ನಲ್ಲಿ ಧರ್ಮಸ್ಥಳದ ಪಾಂಗಳ ಗ್ರಾಮದಲ್ಲಿ ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆದಿತ್ತು. ಈ ಘಟನೆಯು ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.


Spread the love

LEAVE A REPLY

Please enter your comment!
Please enter your name here