ಕಂಡಕ್ಟರ್ ಮೇಲೆ ನಡೆದಿದ್ದ ಹಲ್ಲೆ ಕೇಸ್ʼಗೆ ಬಿಗ್ ಟ್ವಿಸ್ಟ್! ಪೋಕ್ಸೋ ಕೇಸ್‌ ದಾಖಲು

0
Spread the love

ಬೆಳಗಾವಿ: ಕನ್ನಡ ಮಾತನಾಡು ಎಂದಿದ್ದಕ್ಕೆ ಎನ್​ಡಬ್ಲ್ಯುಕೆಆರ್​ಟಿಸಿ ನಿರ್ವಾಹಕನ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ವಾಹಕ ಮಹಾದೇವ ಹುಕ್ಕೇರಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

Advertisement

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಕಂಡಕ್ಟರ್ ಮಹಾದೇವ ಅವರು ಬಸ್‌ನಲ್ಲೇ ಕೆಟ್ಟ ದೃಷ್ಟಿಯಿಂದ ನೋಡಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಮಾರಿಹಾಳ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಶನಿವಾರ ಬೆಳಗ್ಗೆ 2:30ರ ವೇಳೆಗೆ ಬಾಲಕಿಯಿಂದ ದೂರು ದಾಖಲಾಗಿದೆ ಎಂದರು. ಕನ್ನಡ ಮಾತನಾಡಿ ಎಂದಿದ್ದಕ್ಕೆ ನನ್ನ ಮೇಲೆ ಹಲ್ಲೆಯಾಗಿದೆ ಎಂದು ಮಹಾದೇವ್‌ ಸಲ್ಲಿಸಿರುವ ದೂರಿಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಶುಕ್ರವಾರ ತಡರಾತ್ರಿ ಬಂಧಿಸಿದ್ದಾರೆ ಎಂದರು.


Spread the love

LEAVE A REPLY

Please enter your comment!
Please enter your name here