ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿಯಾಗಿದ್ದ ಪ್ರದೋಷ್ ಅವರನ್ನು ಇದೀಗ ಮಾಫಿ ಸಾಕ್ಷಿಯಾಗಿ ಪರಿಗಣಿಸಲಾಗಿದೆ.
ಹೀಗಾಗಿ ಚಾರ್ಜ್ಶೀಟ್ನಲ್ಲಿ ಆರೋಪಿ ಎಂದು ನಮೂದಿಸಲಾಗಿದ್ದ ಪ್ರದೋಷ್ ಅವರ ಹೆಸರನ್ನು ತೆಗೆದುಹಾಕುವಂತೆ ಕೋರ್ಟ್ಗೆ ಮನವಿ ಸಲ್ಲಿಸಲಾಗಿದೆ.
ಪ್ರದೋಷ್ ಪರ ವಕೀಲರು ಈ ಕುರಿತು ನ್ಯಾಯಾಲಯಕ್ಕೆ ಮನವಿ ಮಾಡಿದ್ದು, ಚಾರ್ಜ್ಶೀಟ್ನಲ್ಲಿ ಆರೋಪಿ ಎಂದು ಉಲ್ಲೇಖಿಸಿರುವ ಪ್ರದೋಷ್ ಅವರ ಹೆಸರನ್ನು ಡಿಲೀಟ್ ಮಾಡುವಂತೆ ಕೋರಿದ್ದಾರೆ.
ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು ಪ್ರದೋಷ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಅಂಗೀಕರಿಸಿರುವ ಹಿನ್ನೆಲೆಯಲ್ಲಿ, ಇನ್ನು ಮುಂದೆ ಅವರನ್ನು ಪ್ರಾಸಿಕ್ಯೂಷನ್ ವಿಟ್ನೆಸ್ ಆಗಿ ಪರಿಗಣಿಸಲಾಗುತ್ತದೆ.
ಈ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ಶೀಟ್ನಲ್ಲಿ 14ನೇ ಆರೋಪಿಯಾಗಿದ್ದ ಪ್ರದೋಷ್ ಅವರ ಸ್ಥಾನಮಾನ ಬದಲಾಗಿದೆ.



