HomeKarnataka Newsಬಿಗ್ ಬಾಸ್ ಬಂದ್: ತಪ್ಪುಗಳನ್ನು ಪರಿಹರಿಸಿಕೊಳ್ಳಲು ಅವಕಾಶ ನೀಡುವಂತೆ ಡಿ.ಕೆ.ಶಿವಕುಮಾರ್ ಸೂಚನೆ

ಬಿಗ್ ಬಾಸ್ ಬಂದ್: ತಪ್ಪುಗಳನ್ನು ಪರಿಹರಿಸಿಕೊಳ್ಳಲು ಅವಕಾಶ ನೀಡುವಂತೆ ಡಿ.ಕೆ.ಶಿವಕುಮಾರ್ ಸೂಚನೆ

For Dai;y Updates Join Our whatsapp Group

Spread the love

ಬೆಂಗಳೂರು: ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆ ತಪ್ಪು. ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ಖಂಡಿಸಬೇಕು. ತಪ್ಪಿತಸ್ಥನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯೆ ನೀಡಿದರು.

ಸುಪ್ರೀಂಕೋರ್ಟ್ ನಲ್ಲಿ ಶೂ ಎಸೆತ ಪ್ರಕರಣದ ಬಗ್ಗೆ ಕೇಳಿದಾಗ, “ಮುಖ್ಯ ನ್ಯಾಯಮೂರ್ತಿಯವರು ತಪ್ಪಿತಸ್ಥನ ವಿರುದ್ಧ ಕ್ರಮ ತೆಗದುಕೊಳ್ಳಬೇಡಿ ಎಂದಿದ್ದಾರೆ. ಆದರೂ ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು” ಎಂದರು.

ಬಿಗ್ ಬಾಸ್ ಬಂದ್; ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸೂಚನೆ

ಬಿಗ್ ಬಾಸ್ ಕಾರ್ಯಕ್ರಮ ನಡೆಯುವ ಜಾಲಿವುಡ್ ಸ್ಟುಡಿಯೋವನ್ನು ಉದ್ಘಾಟನೆ ಮಾಡಿದ್ದೇ ನಾನು. ಅಲ್ಲಿ ಏನಾಗಿದೆ ಎಂಬ ಬಗ್ಗೆ ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದಿದ್ದೇನೆ. ಜೊತೆಗೆ ಉದ್ಯೋಗ ಮುಖ್ಯ ಎಂದೂ ಹೇಳಿದ್ದೇನೆ. ಖಾಸಗಿಯವರು ಹೂಡಿಕೆ ಮಾಡಿರುತ್ತಾರೆ. ಇದಕ್ಕೆ ಏನು ಪರಿಹಾರ ಕಂಡುಕೊಳ್ಳಬಹುದೋ ಅದಕ್ಕೆ ಅವಕಾಶ ನೀಡಿ ಎಂದೂ ತಿಳಿಸಿದ್ದೇನೆ. ಬಿಗ್ ಬಾಸ್ ಒಂದೇ ಅಲ್ಲ. ಎಲ್ಲಾ ಮನರಂಜನಾ ಕಾರ್ಯಕ್ರಮಗಳು ನಡೆಯಬೇಕು” ಎಂದರು.

“ಜಾಲಿವುಡ್ ಸ್ಟುಡಿಯೋದವರು ಮಾಲಿನ್ಯ ನಿಯಮಗಳನ್ನು ಪಾಲಿಸಿಲ್ಲ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ನೀಡಲಾಗಿತ್ತು. ಅದರ ಆದೇಶದಂತೆ ಈಗ ಕ್ರಮ ತೆಗೆದುಕೊಳ್ಳಲಾಗಿದೆ. ಅಧಿಕಾರಿಗಳು ಕಾನೂನಾತ್ಮಕವಾಗಿ ಕೆಲಸ ಮಾಡಿದ್ದಾರೆ. ಈ ವಿಚಾರಗಳನ್ನು ನಾನು ಮಾಧ್ಯಮಗಳ ಮೂಲಕ ತಿಳಿದುಕೊಂಡೆ” ಎಂದು ಹೇಳಿದರು.

ನಟ್ಟು ಬೋಲ್ಟ್ ಟೈಟ್ ಎಂದು ಜೆಡಿಎಸ್ ಹಾಗೂ ಕುಮಾರಸ್ವಾಮಿ ಅವರು ಎಕ್ಸ್ (ಟ್ವೀಟ್) ಮಾಡಿರುವ ಬಗ್ಗೆ ಕೇಳಿದಾಗ, “ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ಕುಮಾರಸ್ವಾಮಿ ಅವರಾದರೂ ಮಾಡಿಕೊಳ್ಳಲಿ, ಮೇಲಿನಿಂದ ಯಾರನ್ನಾದರೂ ಕರೆದುಕೊಂಡಾದರೂ ಬಂದು ಮಾಡಿಕೊಳ್ಳಲಿ” ಎಂದು ವ್ಯಂಗ್ಯವಾಡಿದರು.

“ಈ ವಿಚಾರದಲ್ಲಿ ಜೆಡಿಎಸ್ ಹಾಗೂ ಕುಮಾರಸ್ವಾಮಿ ಅವರು ರಾಜಕೀಯ ಮಾಡುತ್ತಿದ್ದಾರೆ. ಪ್ರತಿದಿನ ನನ್ನನ್ನು, ನನ್ನ ಹೆಸರನ್ನು ನೆನಪಿಸಿಕೊಳ್ಳದಿದ್ದರೆ ಅವರಿಗೆ (ಕುಮಾರಸ್ವಾಮಿ) ನೆಮ್ಮದಿ, ನಿದ್ದೆ ಹಾಗೂ ಯಾವುದಕ್ಕೂ ಶಕ್ತಿ ಬರುವುದಿಲ್ಲ” ಎಂದು ಲೇವಡಿ ಮಾಡಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!