ಬೆಂಗಳೂರು: ಬಿಗ್ಬಾಸ್ ಕನ್ನಡ ಸೀಸನ್ 12ರ ವಿಜೇತ ಗಿಲ್ಲಿಗೆ ದೊರೆತ ಜನಪ್ರಿಯತೆಯ ಹಿಂದೆ ಅಭಿಮಾನಿಗಳ ಪ್ರೀತಿ ಮಾತ್ರವಲ್ಲ, ಹಿರಿಯ ನಟ ಶಿವರಾಜ್ಕುಮಾರ್ ಅವರ ಆಶೀರ್ವಾದವೂ ಇದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.
ಬಿಗ್ಬಾಸ್ ಟ್ರೋಫಿ ಗೆದ್ದ ನಂತರ ಗಿಲ್ಲಿ ಮಾನ್ಯತಾ ಟೆಕ್ ಪಾರ್ಕ್ನಲ್ಲಿರುವ ಶಿವಣ್ಣ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಶಿವಣ್ಣ ದಂಪತಿ ಆತ್ಮೀಯವಾಗಿ ಸಿಹಿ ತಿನಿಸಿ, ಮುಂದಿನ ಬದುಕಿಗೆ ಶುಭ ಹಾರೈಸಿದರು.
ಗಮನಾರ್ಹ ಸಂಗತಿ ಎಂದರೆ, ಫಿನಾಲೆಗೆ ಮುನ್ನವೇ ಶಿವಣ್ಣ ಗಿಲ್ಲಿಯೇ ಗೆಲ್ಲೋದು ಎಂದು ಹೇಳಿದ್ದರು. ಇದೀಗ ಆ ಮಾತು ನಿಜವಾಗಿದ್ದು, ಅಭಿಮಾನಿಗಳಲ್ಲಿ ಭಾರೀ ಸಂಭ್ರಮ ಮನೆಮಾಡಿದೆ.
ಬಿಗ್ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ 40 ಕೋಟಿಗೂ ಅಧಿಕ ಮತಗಳನ್ನು ಪಡೆದು ಮೊದಲ ಸ್ಥಾನ ಪಡೆದರೆ, ರಕ್ಷಿತಾ ಶೆಟ್ಟಿ ರನ್ನರ್ ಅಪ್ ಆಗಿದ್ದಾರೆ.



