ಬೆಂಗಳೂರು: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ ಸ್ಥಗಿತಗೊಂಡಿದೆ. ಬಿಗ್ ಬಾಸ್ ಮನೆಗೆ ಬಿಗ ಬಿದ್ದಿದೆ. ಬಿಗ್ ಬಾಸ್ ಕನ್ನಡ ಸೀಸನ್ 12 ರ ಚಿತ್ರೀಕರಣ ನಡೆಯುತ್ತಿದ್ದ ಬಿಡದಿಯಲ್ಲಿನ ಸ್ಟುಡಿಯೊವನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳವಾರ ಸೀಲ್ ಮಾಡಿದ್ದು,
ಇದರಿಂದ ಶೋ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಇನ್ನೂ ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕಿದ ರಾಮನಗರ ಜಿಲ್ಲಾಡಳಿತದ ಕ್ರಮವನ್ನು ಪ್ರಶ್ನಿಸಿ ಬಿಗ್ಬಾಸ್ ತಂಡದ ಪರವಾಗಿ ವಕೀಲೆ ತೇಜಸ್ವಿನಿ ಅರೂರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ತುರ್ತಾಗಿ ವಿಚಾರಣೆ ನಡೆಸುವಂತೆ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿ ಸ್ವೀಕರಿಸಿರುವ ಕೋರ್ಟ್, ಇವತ್ತು ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸೋದಾಗಿ ತಿಳಿಸಿದೆ. ಹೈಕೋರ್ಟ್ ತೀರ್ಪಿನ ಮೇಲೆ ಬಿಗ್ಬಾಸ್ ಶೋ ಭವಿಷ್ಯ ನಿಂತಿದೆ. ಇಂದು ಮಧ್ಯಾಹ್ನ ಕೋರ್ಟ್ನಲ್ಲಿ ಏನೆಲ್ಲ ವಿಚಾರಣೆ ನಡೆಯಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್- 12 ಶೋ ನಡೆಸುತ್ತಿದ್ದ ಜಾಲಿವುಡ್ ಸ್ಟುಡಿಯೋ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆದಿರಲಿಲ್ಲ. ಈ ಸಂಬಂಧ ಜಾಲಿವುಡ್ ಸ್ಟುಡಿಯೋಗೆ ನೋಟಿಸ್ ನೀಡಲಾಗಿತ್ತು.
ಇದೀಗ ಸ್ಟುಡಿಯೋಗೆ ರಾಮನಗರದ ತಹಶೀಲ್ದಾರ್ ತೇಜಸ್ವಿನಿ ಅವರು ಬೀಗ ಜಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಗ್ ಬಾಸ್- 12ರ ಸ್ಪರ್ಧಿಗಳನ್ನು ಹೊರಗೆ ಕರೆದುಕೊಂಡು ಬರಲಾಗಿದೆ. ಸದ್ಯ ಕಾರಿನ ಮೂಲಕ ಎಲ್ಲಾ ಸ್ಪರ್ಧಿಗಳ ವಾಸ್ತವ್ಯಕ್ಕೆ ಈಗಲ್ ಟನ್ ರೆಸಾರ್ಟ್ ನಲ್ಲಿ ವ್ಯವಸ್ಥೆ ಮಾಡಲಾಗಿದೆ.