ಕನ್ನಡದ ಬಿಗ್ ಬಾಸ್ ಶೋ ಕಾರ್ಯಕ್ರಮ ನಡೆಯುತ್ತಿದ್ದ ಮನೆಗೆ ಭೀಗ ಹಾಕಲಾಗಿದೆ. ಈ ಬಗ್ಗೆ ಜೆಡಿಎಸ್ ಪಕ್ಷದವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ನೇರ ಆರೋಪ ಮಾಡಿದ್ದರು. ಬಿಗ್ ಬಾಸ್ ರಿಯಾಲಿಟಿ ಶೋ ಬಂದ್ ಮಾಡಿಸಿ, ಕಲಾವಿದರ ಮೇಲೆ ಸೇಡು ತೀರಿಸಿಕೊಂಡ ನಟ್ಟು ಬೋಲ್ಟ್ ಮಿನಿಸ್ಟರ್ ಡಿ.ಕೆ.ಶಿವಕುಮಾರ್ ಎಂದು ಜೆಡಿಎಸ್ ಸೋಶಿಯಲ್ ಮೀಡಿಯಾದಲ್ಲಿ ಹೇಳಿತ್ತು. ಇದೀಗ ಈ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಕುಮಾರಸ್ವಾಮಿ ಮತ್ತು ಜೆಡಿಎಸ್ ನವರು ರಾಜಕೀಯ ಮಾಡಲಿ. ನಾನು ಅದರ ಬಗ್ಗೆ ತಲೆ ಕಡಿಸಿಕೊಳ್ಳಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿಯವರು ಮಾಡಿದ್ದಾರೆ.
ನಾನು ಜಿಲ್ಲಾಧಿಕಾರಿಗಳಿಗೆ ಹೇಳಿದ್ದೀನಿ. ಉದ್ಯೋಗ ಮುಖ್ಯ. ಏನೇ ಇದ್ದರೂ ಅವರಿಗೆ ಒಂದು ಅವಕಾಶ ಸಿಗಬೇಕು. ಸಮಸ್ಯೆ ಬಗೆಹರಿಸಿಕೊಳ್ಳಲ್ಲಿ ಎಂದು ಹೇಳಿದ್ದೇನೆ.ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಿಗೂ ಕಾಲ್ ಮಾಡಿದ್ದೆ. ನಮ್ಮಲ್ಲಿ ಮನರಂಜನೆ ಸಹ ಮುಖ್ಯ. ನಾನೇ ಉದ್ಘಾಟನೆ ಮಾಡಿದ್ದೀನಿ. ಅವರಿಗೆ ನನ್ನ ಬಗ್ಗೆ ಮಾತಾಡಿಲ್ಲ ಅಂದ್ರೆ ನೆಮ್ಮದಿ ಇರಲ್ಲ. ಅವರಿಗೆ ಶಕ್ತಿ ಬರಲ್ಲ, ನಿದ್ದೆ ಬರಲ್ಲ ಎಂದು ಹೇಳಿದರು.
ಬಿಗ್ ಬಾಸ್ ಆಗಲಿ, ಯಾವುದೇ ಆಗಲಿ, ಮನೋರಂಜನೆ ಇರಬೇಕು. ಹೂಡಿಕೆ ಮಾಡಿರುತ್ತಾರೆ ಏನೋ ತಪ್ಪು ಮಾಡಿರ್ತಾರೆ. ತಪ್ಪನ್ನು ಸರಿ ಮಾಡಿಕೊಳ್ಳಲು ಅವಕಾಶ ಕೋಡಬೇಕು. ಇದು ನನ್ನ ಸಲಹೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.