‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿಜೇತ ಗಿಲ್ಲಿ ನಟ ಇದೀಗ ಮಾಧ್ಯಮ ಸಂದರ್ಶನಗಳಲ್ಲಿ ತಮ್ಮ ವ್ಯಕ್ತಿತ್ವದ ಮೂಲಕ ಮತ್ತೆ ಜನಮನ ಸೆಳೆಯುತ್ತಿದ್ದಾರೆ. ಕಾರ್ಯಕ್ರಮದ ವೇಳೆ ನಡೆದ ಜಗಳಗಳು, ಟೀಕೆಗಳ ಬಗ್ಗೆ ಮಾತನಾಡಿರುವ ಅವರು, “ಯಾರ ಮೇಲೂ ದ್ವೇಷ ಇಲ್ಲ” ಎಂದು ಹೇಳಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.
ಬಿಗ್ ಬಾಸ್ ಮನೆಯಲ್ಲಿ ಕಾಮಿಡಿ ಮತ್ತು ಸರಳ ಸ್ವಭಾವದ ಮೂಲಕ ಗಿಲ್ಲಿ ನಟ ವೀಕ್ಷಕರ ಹೃದಯ ಗೆದ್ದಿದ್ದರು. ಬಿಗ್ ಬಾಸ್ ಮುಗಿದ ನಂತರವೂ ಅವರ ಜನಪ್ರಿಯತೆ ಇಳಿಮುಖವಾಗದೇ, ಕರ್ನಾಟಕ ಮಾತ್ರವಲ್ಲದೆ ಅಕ್ಕಪಕ್ಕದ ರಾಜ್ಯಗಳಲ್ಲಿಯೂ ಅವರ ರೀಲ್ಸ್ ವೈರಲ್ ಆಗುತ್ತಿವೆ.
ಸೀಸನ್ ಮುಗಿದ ಬಳಿಕ ಹಲವಾರು ಸ್ಪರ್ಧಿಗಳು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ಡಾಗ್ ಸತೀಶ್ ಅವರು ಗಿಲ್ಲಿ ಬಗ್ಗೆ ನೆಗೆಟಿವ್ ಕಾಮೆಂಟ್ ಮಾಡಿದ್ದು, ಅಶ್ವಿನಿ ಗೌಡ ಅವರು ಗಿಲ್ಲಿಯ ಗೆಲುವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಎಲ್ಲಾ ವಿಚಾರಗಳಿಗೆ ಪ್ರತಿಕ್ರಿಯಿಸಿರುವ ಗಿಲ್ಲಿ ನಟ,
“ಬಿಗ್ ಬಾಸ್ ಮನೆಯಲ್ಲಿ ಜಗಳ ಸಹಜ. ಟಾಸ್ಕ್, ನಾಮಿನೇಷನ್ ಎಲ್ಲವೂ ಆಟದ ಭಾಗ. ಹೊರಬಂದ ಮೇಲೆ ನಾನು ಯಾವುದನ್ನೂ ಮನಸ್ಸಿಗೆ ಹಚ್ಚಿಕೊಂಡಿಲ್ಲ” ಎಂದು ಹೇಳಿದ್ದಾರೆ.
ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಗಿಲ್ಲಿ ನಟರನ್ನು ಹೊಗಳುತ್ತಿದ್ದು, “ನಿನ್ನ ಮನಸ್ಸು ಬಹಳ ಶುದ್ಧ” ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಗಿಲ್ಲಿ ನಟರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಸಾಮಾನ್ಯ ಹಿನ್ನೆಲೆಯಿಂದ ಬಂದ ಗಿಲ್ಲಿ ನಟ, ಕಷ್ಟಪಟ್ಟು ಈ ಮಟ್ಟಕ್ಕೆ ತಲುಪಿದ್ದಾರೆ. ಈಗ ಅವರಿಗೆ ಸಿನಿಮಾಗಳಲ್ಲಿ ಅವಕಾಶಗಳು ಹೆಚ್ಚಾಗುತ್ತಿದ್ದು, ಅನೇಕ ವೇದಿಕೆಗಳಲ್ಲಿ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಇನ್ಸ್ಟಾಗ್ರಾಮ್‌ನಲ್ಲಿ ಗಿಲ್ಲಿ ನಟರನ್ನು 2 ಮಿಲಿಯನ್‌ಗಿಂತ ಹೆಚ್ಚು ಜನ ಫಾಲೋ ಮಾಡುತ್ತಿರುವುದು ಅವರ ಜನಪ್ರಿಯತೆಯ ಸಾಕ್ಷಿಯಾಗಿದೆ.



