ಬಿಹಾರ: ಬಿಹಾರದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಇಂದು ಚುನಾವಣಾ ಆಯೋಗ ಪ್ರಕಟಿಸಿದೆ. ಈ ಬಾರಿ 2 ಹಂತಗಳಲ್ಲಿ ಮತದಾನ ನಡೆಯಲಿದೆ. ಬಿಹಾರದಲ್ಲಿ ಎನ್ಡಿಎ ಬಣದ ನಿತೀಶ್ ಕುಮಾರ್ ಅವರ ಜೆಡಿಯು ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಅಥವಾ HAM ಕಣದಲ್ಲಿದೆ. ಹಾಗೂ ಇಂಡಿಯ ಬಣದ ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾದಳ (RJD) ನೇರ ಸ್ಪರ್ಧೆ ನೀಡಲಿದೆ.
ನವೆಂಬರ್ 6ರ ಗುರುವಾರ ಮೊದಲ ಹಂತ, ನವೆಂಬರ್ 11ರ ಮಂಗಳವಾರ 2ನೇ ಹಂತದಲ್ಲಿ ಒಟ್ಟು 243 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 14 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಿಳಿಸಿದ್ದಾರೆ.
ಮೊದಲ ಹಂತದಲ್ಲಿ 121 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 10 ರಂದು ಗೆಜೆಟ್ ಅಧಿಸೂಚನೆ ಪ್ರಕಟವಾಗಲಿದೆ. ಅದೇ ರೀತಿ 2ನೇ ಹಂತದಲ್ಲಿ 122 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 13ರಂದು ಅಧಿಸೂಚನೆ ಪ್ರಕಟಿಸಲಾಗುತ್ತದೆ.
ಮೊದಲ ಹಂತದ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅ.17 ಕೊನೆಯ ದಿನವಾಗಿದ್ದು, 2ನೇ ಹಂತದ ಕ್ಷೇತ್ರಗಳಿಗೆ ಅ.21 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 18 ಮತ್ತು ಅಕ್ಟೋಬರ್ 21 ರಂದು ಕ್ರಮವಾಗಿ ಮೊದಲ ಮತ್ತು 2ನೇ ಹಂತದ ಕ್ಷೇತ್ರಗಳಿಗೆ ಸಲ್ಲಿಸಿರುವ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಲಿದೆ. ಅಕ್ಟೋಬರ್ 20 ಹಾಗೂ ಅ.23 ಕ್ರಮವಾಗಿ ನಾಮಪತ್ರ ಹಿಂಪಡೆಯಲು ಕೊನೆಯದಿನವಾಗಿದೆ. ನವೆಂಬರ್ 6ರಂದು ಚುನಾವಣೆ ನಡೆಯಲಿದೆ. ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದ್ದು, ಯಾರು ಅಧಿಕಾರದ ಗದ್ದುಗೆ ಹಿಡಿಯಲಿದ್ದಾರೆ ಎಂದು ತಿಳಿಯಲಿದೆ.