ಧಾರವಾಡ:– ತಾಲೂಕಿನ ಇಟಿಗಟ್ಟಿ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಡಿಆರ್ ಎಎಸ್‌ಐ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ. D.R ASI ಎಲ್ಲಪ್ಪ ಕುಂಬಾರ್ ಎಂಬುವವರೇ ಮೃತ ದುರ್ದೈವಿ. ಧಾರವಾಡ ಕಡೆಯಿಂದ ಹುಬ್ಬಳ್ಳಿ ಕಡೆಗೆ ಬೈಕ್‌ನಲ್ಲಿ ಹೊರಟಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.
ಈ ವೇಳೆ ಬೈಕ್ ಮೇಲಿದ್ದ ಯಲ್ಲಪ್ಪ ಅವರ ತಲೆಗೆ ಗಂಭೀರ ಪೆಟ್ಟಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿಪರಿಶೀಲನೆ ನಡೆಸಿದ್ದಾರೆ. ಎಸ್ಕೇಪ್ ಆಗಿರುವ ಆರೋಪಿಗಾಗಿ ಶೋಧ ಕಾರ್ಯ ಮುಂದುವರಿದಿದೆ.



