ಕೋಲಾರ: ಕೋಲಾರ ತಾಲೂಕಿನ ತ್ಯಾವನಹಳ್ಳಿಯ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ BMTC ಕಂಡಕ್ಟರ್ ಸಾವನ್ನಪ್ಪಿರುವ ಘಟನೆ ನಡೆದಿದೆ. ತ್ಯಾವನಹಳ್ಳಿ ಗ್ರಾಮದ ಮಧುಮೋಹನ್ ರಾವ್(46) ಮೃತ ಕಂಡಕ್ಟರ್ ಆಗಿದ್ದು,
Advertisement
ಕೆಲಸ ಮುಗಿಸಿಕೊಂಡು ವಾಪಸ್ ಆಗುವ ವೇಳೆ ಬೈಕ್ ಕಾಲುವೆಗೆ ಬಿದ್ದು ಅಪಘಾತ ಸಂಭವಿಸಿದೆ. ತಲೆಗೆ ಗಂಭೀರ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.