ಮುಂಬೈ: ಟ್ರಕ್ ಹಾಗೂ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಕಿರುತೆರೆ ನಟ ಸಾವನ್ನಪ್ಪಿರುವ ಘಟನೆ ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ನಡೆದಿದೆ. ಅಮನ್ ಜೈಸ್ವಾಲ್ (23) ಮೃತ ನಟ ಎಂದು ಗುರುತಿಸಲಾಗಿದೆ. ಮುಂಬೈನ ಹಿಲ್ ಪಾರ್ಕ್ ರಸ್ತೆಯಲ್ಲಿ ತಮ್ಮ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇದರಿಂದ ಅವರು ತೀವ್ರವಾಗಿ ಗಾಯಗೊಂಡಿದ್ದರು.
Advertisement
ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಆಗಲೇ ಅವರು ನಿಧನ ಹೊಂದಿದ್ದರು. ಸದ್ಯ ಟ್ರಕ್ ಹಾಗೂ ಅದರ ಚಾಲಕ ಪೊಲೀಸ್ ಕಸ್ಟಡಿಯಲ್ಲಿ ಇದ್ದಾರೆ. ಅಂಬೋಲಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಧರ್ತಿಪುತ್ರ ನಂದಿನಿ’ ಧಾರಾವಾಹಿ ಮೂಲಕ ಅವರು ಗಮನ ಸೆಳೆದಿದ್ದರು. ಅವರ ಸಾವಿಗೆ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ.