ಮಸ್ಕಿ:- ಬೈಕ್ ಮತ್ತು ಇನ್ನೋವಾ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಮಸ್ಕಿ ತಾಲ್ಲೂಕಿನ ಸಂತೆಕೆಲ್ಲೂರು ಗ್ರಾಮದ ಪೆಟ್ರೋಲ್ ಬಂಕ್ ಬಳಿ ಜರುಗಿದೆ.
Advertisement
ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಬೈಕ್ ಸವಾರ ಲಿಂಗಸುಗೂರು ತಾಲ್ಲೂಕಿನ ಹೊನ್ನಳ್ಳಿ ಗ್ರಾಮದ ವೀರೇಶ (33) ಎಂದು ಗುರುತಿಸಲಾಗಿದೆ. ಇನ್ನೋವಾ ಕಾರು ಪಲ್ಟಿಯಾಗಿದ್ದು, ಅದರಲ್ಲಿದ್ದ ಮಹಿಳೆ, ಮಗು ಸೇರಿ ನಾಲ್ವರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಸ್ಕಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.