ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ದ್ವಿಚಕ್ರ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರದ ಫಾಕ್ಸ್ ಕಾನ್ ಕಂಪನಿ ಬಳಿ ನಡೆದಿದೆ. ಪಾಲ್ ದಿನ್ನೆಯ ನಿವಾಸಿಯಾದ ಚೆನ್ನಕೇಶವ (22) ಮೃತ ದುರ್ದೈವಿಯಾಗಿದ್ದು, ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು,
Advertisement
ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ . ಫಾಕ್ಸ್ ಕಾನ್ ಕಂಪನಿಗೆ ಯುವತಿಯನ್ನು ಬಿಡಲು ಹೋದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಸದ್ಯ ಮೃತದೇಹವನ್ನು ಶವಾಗಾರಕ್ಕೆ ರವಾನೆ ಮಾಡಲಾಗಿದ್ದು ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.