ಚಿಕ್ಕೋಡಿ: ಅಥಣಿಯ ಕೃಷ್ಣ ಸಕ್ಕರೆ ಕಾರ್ಖಾನೆ ಚುನಾವಣೆಯ ಮಧ್ಯೆ ದುರಂತ ಸಂಭವಿಸಿದ್ದು, ಮತದಾನಕ್ಕೆ ಬಂದ ಇಬ್ಬರು ವ್ಯಕ್ತಿಗಳು ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಹಳ್ಯಾಳ ಹೊರವಲಯದ ಕೃಷ್ಣ ಸಕ್ಕರೆ ಕಾರ್ಖಾನೆ ರೈತ ಭವನದಲ್ಲಿ ನಡೆಯುತ್ತಿರುವ ಚುನಾವಣೆಗೆ ಸಪ್ತಸಾಗರ ಮೂಲದ ಇಬ್ಬರು ಮತದಾರರು ಮತದಾನ ಮಾಡಲು ಆಗಮಿಸಿದ್ದರು. ಮತದಾನ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ, ದರೂರು ಕೃಷ್ಣ ನದಿ ಸೇತುವೆ ಹತ್ತಿರ ಬೈಕ್ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.
ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳು ತೀವ್ರ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದ್ದಾರೆ.
ಇದೇ ವೇಳೆ, ಬೆಳಿಗ್ಗೆಯಿಂದಲೇ ಮತದಾನ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಥಣಿ–ಗೋಕಾಕ್ ರಾಜ್ಯ ಹೆದ್ದಾರಿಯಲ್ಲಿ ಸುಮಾರು 2 ಕಿಮೀ ಉದ್ದದ ಟ್ರಾಫಿಕ್ ಜಾಮ್ ಉಂಟಾಗಿದೆ.



