ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ: ಇಂದಿನಿಂದ ರಸ್ತೆಯಲ್ಲಿ ಕಾಣಿಸಿಕೊಂಡ್ರೆ ಕ್ರಮ ಗ್ಯಾರಂಟಿ!

0
Spread the love

ಬೆಂಗಳೂರು:- ಕರ್ನಾಟಕದಲ್ಲಿ ಬೈಕ್​ ಟ್ಯಾಕ್ಸಿಗಳಿಗೆ ಬ್ರೇಕ್ ಹಾಕಲು ಹೈಕೋರ್ಟ್​ ಆದೇಶ ನೀಡಿದ್ದು, ಇಂದಿನಿಂದ ಬೈಕ್​ ಟ್ಯಾಕ್ಸಿಗಳು ರಸ್ತೆಯಲ್ಲಿ ಕಾಣಿಸಿಕೊಂಡ್ರೆ ಸಾರಿಗೆ ಇಲಾಖೆ ಬೇಟೆಗೆ ಬಲಿಯಾಗೋದು ಖಚಿತವಾಗಿದೆ.

Advertisement

ರಾಜ್ಯದಲ್ಲಿ ಅನೇಕ ದಿನದಿಂದ ಆಟೋ ಚಾಲಕರು ವರ್ಸಸ್ ಬೈಕ್ ಟ್ಯಾಕ್ಸಿಯವರ ನಡುವಿನ ಗುದ್ದಾಟ ನಡೆಯುತ್ತಿತ್ತು. ಸದ್ಯ ಈಗ ಇದಕ್ಕೆಲ್ಲಾ ಇಂದಿನಿಂದ ಬ್ರೇಕ್ ಬೀಳಲಿದೆ. ನ್ಯಾಯಾಲಯದ ಆದೇಶದಂತೆ ರಾಜ್ಯದಲ್ಲಿ ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿ ಸ್ಥಗಿತಗೊಳ್ಳಲಿದೆ.

ಟ್ರಾಫಿಕ್ ಕಡಿಮೆ, ಟ್ರಾವೆಲ್ ದರವೂ ಕಡಿಮೆ. ಒಂದು ಕಡೆಯಿಂದ ಇನ್ನೊಂದು ಕಡೆಗೆ ಕ್ವಿಕ್ ಡ್ರಾಪ್ ಪಾಯಿಂಟ್. ಶರವೇಗದಲ್ಲಿ ಜನರಿಗೆ ಬೇಕಾದ ಜಾಗ ತಲುಪಿಸುವ ಕೆಲಸ ಮಾಡುತ್ತಿದ್ದು, ಅಂದರೆ ಅದು ಬೈಕ್ ಟ್ಯಾಕ್ಸಿ. ವೈಟ್ ಬೋರ್ಡ್‌ನಲ್ಲಿ ಬೈಕ್ ಟ್ಯಾಕ್ಸಿ ಓಡಿಸೋದು ಸೇರಿ ಸುರಕ್ಷತೆ ವಿಚಾರದಲ್ಲಿ ಬೈಕ್ ಟ್ಯಾಕ್ಸಿ ಒಂದು ಹೆಜ್ಜೆ ಹಿಂದೆಯೇ ಉಳಿದುಕೊಂಡಿದೆ. ಇದೇ ಕಾರಣಕ್ಕೆ ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿ ರಸ್ತೆಗೆ ಇಳಿಯುವ ಹಾಗಿಲ್ಲ ಎಂದು ಕೋರ್ಟ್ ಆದೇಶ ಹೊರಡಿಸಿದೆ. ಆರ್‌ಟಿಓ ಕೂಡ ಅನಧಿಕೃತ ಬೈಕ್ ಟ್ಯಾಕ್ಸಿ ರಸ್ತೆಗಿಳಿಸಿದರೆ ಅಂಥವರ ವಿರುದ್ಧ ಕ್ರಮಕ್ಕೆ ಮುಂದಾಗಲಿದೆ.


Spread the love

LEAVE A REPLY

Please enter your comment!
Please enter your name here