HomeKarnataka Newsಜೂ. 16ರಿಂದ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ: ಓಲಾ, ಊಬರ್, ರಾಪಿಡೋಗೆ ಶಾಕ್ ಕೊಟ್ಟ ಹೈಕೋರ್ಟ್!

ಜೂ. 16ರಿಂದ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ: ಓಲಾ, ಊಬರ್, ರಾಪಿಡೋಗೆ ಶಾಕ್ ಕೊಟ್ಟ ಹೈಕೋರ್ಟ್!

For Dai;y Updates Join Our whatsapp Group

Spread the love

ಬೆಂಗಳೂರು:– ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಓಲಾ, ಊಬರ್ ಸೇರಿದಂತೆ ಹಲವು ಕಂಪನಿಗಳು ಬೈಕ್ ಟ್ಯಾಕ್ಸಿ ಸೇವೆಯನ್ನು ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ನಗರ, ಪಟ್ಟಣಗಳಲ್ಲಿ ನೀಡುತ್ತಿದೆ. ಹಲವರು ಈ ಬೈಕ್ ಟ್ಯಾಕ್ಸಿಯನ್ನು ಅವಲಂಬಿಸಿದ್ದಾರೆ. ಆಟೋ, ಕ್ಯಾಬ್‌ಗೆ ಹೋಲಿಸಿದರೆ ವೆಚ್ಚವೂ ಕಡಿಮೆ. ಟ್ರಾಫಿಕ್‌ನಲ್ಲಿ ಹೆಚ್ಚಿನ ಸಮಯ ವ್ಯರ್ಥ ಮಾಡದೇ ಬೇಗನೆ ನಿಗದಿತ ಸ್ಥಳ ತಲುಪಬಹುದು. ಆದರೆ ಸೋಮವಾರದಿಂದ ಅಂದ್ರೆ ಜೂ.16 ರಿಂದ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸಂಪೂರ್ಣ ಬ್ಯಾನ್ ಆಗುತ್ತಿದೆ.

ಎಸ್, ಬೆಂಗಳೂರಿನಲ್ಲಿ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬಂದ್ ಮಾಡುವಂತೆ ಈಗಾಗಲೇ ಕರ್ನಾಟಕ ಹೈಕೋರ್ಟ್​ ಆದೇಶ ಹೊರಡಿಸಿದೆ. ಇದನ್ನ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮವಿಯನ್ನೂ ವಿಚಾರಣೆ ನಡೆಸಿದ ಹೈಕೋರ್ಟ್, ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ನಿರಾಕರಿಸಿದೆ. ಹೈಕೋರ್ಟ್‌ನ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಹಾಗೂ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ ಕುಮಾರ್‌ ಅವರಿದ್ದ ಪೀಠ, ಬೈಕ್ ಟ್ಯಾಕ್ಸಿ ಪರ ಮಧ್ಯಂತರ ಆದೇಶ ನೀಡಲು ನಿರಾಕರಿಸಿದ್ದು, ಮೇಲ್ಮನವಿ ಅರ್ಜಿಗಳನ್ನು ಜೂ.24ರಂದು ಅಂತಿಮವಾಗಿ ತೀರ್ಮಾನಿಸಲಾಗುವುದು ಎಂದಿದೆ. ಹೀಗಾಗಿ ಜೂನ್ 16ರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಇರುವುದಿಲ್ಲ.

ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದು, ಬೈಕ್ ಟ್ಯಾಕ್ಸಿಗಳ ಪರ್ಮಿಟ್ ನಿಯಮ ರೂಪಿಸಲು ಸರ್ಕಾರ ಸಿದ್ಧವಿಲ್ಲ. 8 ರಾಜ್ಯಗಳಲ್ಲಿ ಮಾತ್ರ ಬೈಕ್ ಟ್ಯಾಕ್ಸಿಗೆ ಪರ್ಮಿಟ್ ನೀಡಲಾಗಿದೆ. ಆದ್ರೆ, ಕರ್ನಾಟಕ ಸೇರಿ ಉಳಿದ ರಾಜ್ಯಗಳಲ್ಲಿ ಅನುಮತಿ ನೀಡಲಾಗಿಲ್ಲ. 4 ವರ್ಷಗಳಿಂದ ಮಧ್ಯಂತರ ಆದೇಶದ ಮೇಲೆ ಬೈಕ್ ಟ್ಯಾಕ್ಸಿ ನಡೆಯುತ್ತಿದೆ. ಸುಪ್ರೀಂಕೋರ್ಟ್ ಕೂಡಾ ಮಧ್ಯಂತರ ಆದೇಶ ನಿರಾಕರಿಸಿದೆ ಎಂದು ಕೋರ್ಟ್​ ಗೆ ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!