ಬೆಂಗಳೂರು:- ಇತ್ತೀಚೆಗೆ ಭೀಕರವಾಗಿ ಕೊಲೆಯಾಗಿದ್ದ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಭಾರತೀ ನಗರ ಠಾಣೆ ಪೊಲೀಸರ ಮುಂದೆ ಶಾಸಕ ಬೈರತಿ ಬಸವರಾಜ್ ಅವರು ಮತ್ತೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಮತ್ತೊಂದೆಡೆ ಕೊಲೆ ಪ್ರಕರಣ ರದ್ದು ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಈಗಾಗಲೇ ಈ ಪ್ರಕರಣದಲ್ಲಿ ಹನ್ನೊಂದು ಜನ ಆರೋಪಿಗಳು ಅರೆಸ್ಟ್ ಆಗಿದ್ದು, ಇವರಲ್ಲಿ ಹಲವರು ಬೈರತಿ ಬಸವರಾಜ್‌ಗೆ ಆಪ್ತರು ಎನ್ನಲಾಗಿದೆ. ಆರೋಪಿಗಳ ವಿಚಾರಣೆಯಲ್ಲಿ ಸಿಕ್ಕ ಮಾಹಿತಿ ಆಧಾರದ ಮೇಲೆ ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ನಡುವೆ ಜಗದೀಶ್ ಪತ್ತೆಯಾಗದ ಹಿನ್ನೆಲೆ ಇಂದು ಬೈರತಿ ಬಸವರಾಜ್ ರನ್ನು ಬಂಧಿಸುವ ಸಾಧ್ಯತೆ ಇಲ್ಲ ಎನ್ನಲಾಗಿದೆ.
ಇನ್ನೂ ಕಳೆದ ಶನಿವಾರ ಭಾರತಿನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದ ಮಾಜಿ ಸಚಿವ ಬೈರತಿ ಬಸವರಾಜ್ ಸತತ ಮೂರುವರೆ ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಕೊಲೆ ಪ್ರಕರಣದಲ್ಲಿ ವಿಚಾರಣೆಗೆ ಕರೆದಿದ್ರು, ಪೊಲೀಸರು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೀನಿ. ಇದರಲ್ಲಿ ನನ್ನ ಪಾತ್ರ ಇಲ್ಲ ಅಂತಾ ಹೇಳಿದ್ದೇನೆ. ನನಗೂ ಕೊಲೆಗೂ ಸಂಬಂಧವಿಲ್ಲ ಎಂದಿದ್ದರು.